ಬೀದರ್:ಕೊರೊನಾ ಸೋಂಕಿನ ಅಟ್ಟಹಾಸ ಜಿಲ್ಲೆಯಲ್ಲಿ ಮುಂದುವರೆದಿದ್ದು, ಇಂದು ಒಂದೇ ದಿನ 43 ಜನರಲ್ಲಿ ಕೊರೊನಾ ದೃಢಪಟ್ಟಿದೆ.
ಇಂದು ಜಿಲ್ಲೆಯ ಭಾಲ್ಕಿ, ಹುಮನಾಬಾದ್, ಬಸವಕಲ್ಯಾಣ, ಔರಾದ್ ಹಾಗೂ ಬೀದರ್ ತಾಲೂಕಿನಾದ್ಯಂತ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೆ ಒಟ್ಟು 6,424 ಜನರಿಗೆ ಸೋಂಕು ತಗುಲಿದೆ.

ಈ ದಿನ ಜಿಲ್ಲೆಯಲ್ಲಿ ಸೋಂಕಿನಿಂದ 34 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರಗೆ ಒಟ್ಟು 5,743 ಜನ ಸೋಂಕಿತರು ಗುಣಮುಖರಾದಂತಾಗಿದೆ.
ಜಿಲ್ಲೆಯಲ್ಲಿ ಇಂದು ಕೊರೊನಾದಿಂದ ಇಬ್ಬರು ವ್ಯಕ್ತಿಗಳು ಬಲಿಯಾಗಿದ್ದಾರೆ. ಇದುವರೆಗೆ ಒಟ್ಟು 156 ಜನರು ಸಾವನ್ನಪ್ಪಿದ್ದಾರೆ.