ಬೀದರ್: ಕೊರೊನಾ ವಿರುದ್ಧದ ಹೋರಾಟ ಗಡಿ ಜಿಲ್ಲೆ ಬೀದರ್ನಲ್ಲಿ ಮುಂದುವರೆದಿದೆ. ನಿನ್ನೆ 95 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಜಿಲ್ಲಾಧಿಕಾರಿ ರಾಮಚಂದ್ರನ್ ಸೇರಿದಂತೆ 56 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದೆ.
ಜಿಲ್ಲೆಯ ಬಸವಕಲ್ಯಾಣ, ಭಾಲ್ಕಿ, ಹುಮನಾಬಾದ್, ಔರಾದ್ ಹಾಗೂ ಬೀದರ್ ತಾಲೂಕಿನಲ್ಲಿ ಕೊರೊನಾ ಸೋಂಕು ಹರಡಿದ್ದು, ನಿನ್ನೆ 56 ಜನರಲ್ಲಿ ಸೋಂಕು ಪತ್ತೆಯಾಗಿದೆ. 95 ಜನ ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.