ಕರ್ನಾಟಕ

karnataka

ETV Bharat / state

ಬೀದರ್‌ನಲ್ಲಿ 71 ಮಂದಿಗೆ ಕೊರೊನಾ, ಸೋಂಕಿಗೆ ಮತ್ತೊಂದು ಬಲಿ! - Bidar latest news

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1333ಕ್ಕೆ ಏರಿಕೆಯಾಗಿದೆ. ಇಬ್ಬರು ಅನ್ಯ ಕಾರಣಕ್ಕಾಗಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Bidar corona case
Bidar corona case

By

Published : Jul 18, 2020, 8:05 PM IST

ಬೀದರ್ :ಜಿಲ್ಲೆಯಲ್ಲಿಂದು 71 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೇ, ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಆ ಮೂಲಕ ಸಾವಿನ ಸಂಖ್ಯೆ 56ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಕಮಲನಗರ, ಔರಾದ್, ಭಾಲ್ಕಿ, ಹುಮನಾಬಾದ್, ಬಸವಕಲ್ಯಾಣ ಹಾಗೂ ಬೀದರ್ ತಾಲೂಕಿನಾದ್ಯಂತ ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನೂ, ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1333ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. ಈ ಪೈಕಿ ಇಬ್ಬರು ಅನ್ಯ ಕಾರಣಕ್ಕಾಗಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details