ಬೀದರ್: ಜಿಲ್ಲೆಯಲ್ಲಿ 76 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಸಾವನ್ನಪ್ಪಿರುವುದಾಗಿ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಬೀದರ್ನಲ್ಲಿ 76ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ: 2,734 ಜನರ ಪರೀಕ್ಷಾ ವರದಿ ಬಾಕಿ - ಬೀದರ್ ಸುದ್ದಿ
ಬೀದರ್ ಜಿಲ್ಲೆಯಲ್ಲಿ 76 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇನ್ನೂ 2,734 ಜನರ ಪರೀಕ್ಷಾ ವರದಿ ಬರುವುದು ಬಾಕಿಯಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಬೀದರ್ನಲ್ಲಿ 76ಕ್ಕೇರಿದ ಸೋಂಕಿತರ ಸಂಖ್ಯೆ..2,734 ಜನರ ಪರೀಕ್ಷಾ ವರದಿ ಬಾಕಿ
ಜಿಲ್ಲೆಯಲ್ಲಿ 12,001 ಜನರ ಗಂಟಲು ದ್ರವದ ಮಾದರಿ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 9,191 ಜನರ ವರದಿ ನೆಗೆಟಿವ್ ಬಂದಿದ್ದು, 76 ಜನರ ವರದಿ ಪಾಸಿಟಿವ್ ಬಂದಿದೆ. ಇನ್ನೂ 2,734 ಜನರ ಪರೀಕ್ಷಾ ವರದಿ ಬಾಕಿಯಿದೆ. ಒಟ್ಟು 21 ಸೋಂಕಿತರು ಗುಣಮುಖರಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಅಲ್ಲದೆ 53 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೀದರ್ ಓಲ್ಡ್ ಸಿಟಿಯ ಕಂಟೇನ್ಮೆಂಟ್ ಝೋನ್ನಲ್ಲಿ ಸಾಮೂಹಿಕ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದ್ದು, 76 ಸೋಂಕಿತರ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕದಲ್ಲಿದ್ದವರ ಮೇಲೆ ನಿಗಾ ವಹಿಸಲಾಗಿದೆ.