ಕರ್ನಾಟಕ

karnataka

ETV Bharat / state

ಪ್ರಕಾಶ್​ ಖಂಡ್ರೆ ವಿರುದ್ಧ ಅವಹೇಳನಕಾರಿ ಪೋಸ್ಟ್... ಆರೋಪಿ ಅರೆಸ್ಟ್​​ - kannada news

ಸಾಮಾಜಿಕ ಜಾಲತಾಣದಲ್ಲಿ ಮಾಜಿ ಶಾಸಕ ಪ್ರಕಾಶ್​ ಖಂಡ್ರೆ ಅವರ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿದ ಫೋಟೊ ಜತೆಗೆ ಭಾವಪೂರ್ವ ಶ್ರದ್ಧಾಂಜಲಿ ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಯುವಕನನ್ನು ಬಂಧಿಸಲಾಗಿದೆ.

ಪ್ರಕಾಶ ಖಂಡ್ರೆ ವಿರುದ್ಧ ಅವಹೇಳನಕಾರಿ ಪೊಸ್ಟ್ ಆರೋಪಿಯನ್ನ ಬಂಧಿಸಿದ ಪೊಲೀಸರು

By

Published : Jun 14, 2019, 2:07 PM IST

ಬೀದರ್:ಮಾಜಿ ಶಾಸಕ ಜೆಡಿಎಸ್ ಮುಖಂಡ ಪ್ರಕಾಶ್​ ಖಂಡ್ರೆ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕೀಡಿಗೇಡಿವೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಭಾಲ್ಕಿ ಪಟ್ಟಣದ ಕುಂಭೇಶ್ವರ ಗಲ್ಲಿಯ ಸಚಿನ್ ನಿಲಂಗೆಕರ್​ ಎಂಬಾತ ಕಳೆದ ವಾರ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಶಾಸಕ ಪ್ರಕಾಶ್​ ಖಂಡ್ರೆ ಅವರ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿದ ಫೋಟೊ ಜತೆಗೆ ಭಾವಪೂರ್ವ ಶ್ರದ್ಧಾಂಜಲಿ ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗ್ತಿದೆ. ಇದರಿಂದ ಜಿಲ್ಲೆಯಾದ್ಯಂತ ಪ್ರಕಾಶ್​ ಖಂಡ್ರೆ ಅವರ ಅಭಿಮಾನಿಗಳು ಕೆರಳಿದ್ದರು.

ಪ್ರಕಾಶ್​ ಖಂಡ್ರೆ ವಿರುದ್ಧ ಅವಹೇಳನಕಾರಿ ಪೋಸ್ಟ್- ಆರೋಪಿ ಅರೆಸ್ಟ್​​

ಈ ಕುರಿತು ಜೆಡಿಎಸ್ ತಾಲೂಕು ಅಧ್ಯಕ್ಷ್ಯ ಗೊವಿಂದರಾವ್ ಮೈನಾಳೆ ಅವರು ಭಾಲ್ಕಿ ಟೌನ್ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿಸಿದ್ದ ಸಚಿನ್, ತನ್ನ ಪ್ರತಿಸ್ಪರ್ಧಿ ಮೇಲೆ ದ್ವೇಷ ತೀರಿಸಿಕೊಳ್ಳಲು ಪಿತೂರಿ ಮಾಡಿ ಹೀಗೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಸಚಿನ್ ಅನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ.

ABOUT THE AUTHOR

...view details