ಬೀದರ್: ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಕರ್ನಾಟಕ ಸಾರಿಗೆ ಸಂಸ್ಥೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 5 ಜನ ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿವೆ.
ಬೀದರ್ನಲ್ಲಿ ಬಸ್ಗೆ ಟ್ರ್ಯಾಕ್ಟರ್ ಡಿಕ್ಕಿ: 5 ಜನರಿಗೆ ಗಾಯ
ಬೀದರ್ ಜಿಲ್ಲೆ ಭಾಲ್ಕಿ ಪಟ್ಟಣದ ಹೊರ ವಲಯದ ಗುಂಪಾ ಬಳಿ ಟ್ರ್ಯಾಕ್ಟರ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಐವರಿಗೆ ಗಾಯವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಎಸ್ಆರ್ಟಿಸಿ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ
ಜಿಲ್ಲೆಯ ಭಾಲ್ಕಿ ಪಟ್ಟಣದ ಹೊರ ವಲಯದ ಗುಂಪಾ ಬಳಿ ಅಪಘಾತ ನಡೆದಿದ್ದು, ಔರಾದ್-ಭಾಲ್ಕಿ ಬಸ್ಗೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಬಸ್ಸಿನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ವೆಂಕಟೇಶ, ಸಂಗೀತಾ, ಸ್ವಪ್ನಾ, ಬಾಬು ಪವಾರ ಹಾಗೂ ಶಿಲ್ಪಾ ಎಂಬುವವರಿಗೆ ಗಾಯಗಳಾಗಿದ್ದು, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭಾಲ್ಕಿ ಪೊಲೀಸರು ಭೇಟಿ ನೀಡಿದ್ದಾರೆ.