ಬೀದರ್: ಆಟೋ ಚಾಲಕನ ನಿಯಂತ್ರಣ ತಪ್ಪಿ ಸಂಭವಿಸಿದ ಅಪಘಾತದಲ್ಲಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಬೀದರ್ ಜಿಲ್ಲೆಯ ಔರಾದ ತಾಲೂಕಿನ ವಡಗಾಂವ (ದೇ) ಗ್ರಾಮದ ಸಮೀಪ ಗುರುವಾರ ರಾತ್ರಿ ನಡೆಯಿತು.
ಚಲಿಸುತ್ತಿದ್ದ ಆಟೋ ಎದುರಿಗೆ ಎಮ್ಮೆ ಅಡ್ಡ ಬಂದಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಆಟೋ ಪಲ್ಟಿಯಾಗಿದೆ. ಪ್ರಯಾಣಿಕರನ್ನು ತುಂಬಿಕೊಂಡು ಕಂದಗುಳ ಕಡೆಯಿಂದ ವಡಗಾಂವ(ದೇ) ಗ್ರಾಮಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.