ಬೀದರ್: ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ‘ಲಂಪಿ ಸ್ಕಿನ್’ ಎಂಬ ರೋಗ ಕಾಣಿಸಿಕೊಂಡಿದ್ದು ನನ್ನ ಗಮನಕ್ಕೆ ಬಂದಿದೆ. ಪಶುವೈದ್ಯಾಧಿಕಾರಿಗಳು ರೋಗ ನಿಯಂತ್ರಣಕ್ಕೆ ಮುಂದಾಗಬೇಕು. ಇಲ್ಲವೇ ಪರಿಣಾಮ ಎದುರಿಸಲು ಸಿದ್ಧರಾಗಬೇಕು ಎಂದು ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
‘ಲಂಪಿ ಸ್ಕಿನ್’ ರೋಗ ಹತೋಟಿಗೆ ಬರದಿದ್ರೆ ಅಧಿಕಾರಿಗಳ ಮೇಲೆ ಕ್ರಮ: ಸಚಿವ ಪ್ರಭು ಚೌವ್ಹಾಣ್ ಎಚ್ಚರಿಕೆ - bidar latest news
ಕಲ್ಯಾಣ ಕರ್ನಾಟಕ ಭಾಗದ ಕೆಲ ಜಿಲ್ಲೆಗಳ ಜಾನುವಾರುಗಳಲ್ಲಿ ‘ಲಂಪಿ ಸ್ಕಿನ್’ ಎಂಬ ಕಾಯಿಲೆ ಕಂಡು ಬಂದಿದ್ದು, ದನ-ಕರುಗಳ ಮೈಮೇಲೆ ಗುಳ್ಳೆ ಬರುವುದು, ಜ್ವರ ಕಾಣಿಸಿಕೊಳ್ಳುವುದು, ಆಹಾರ ಸೇವನೆಯಲ್ಲಿ ಸಮಸ್ಯೆ ಕಂಡು ಬರುತ್ತಿರುವುದರಿಂದ ಪಶುಪಾಲಕರು ಆಂತಂಕಕ್ಕಿಡಾಗಿರುವುದು ತಿಳಿದು ಬಂದಿದೆ. ಇದರ ಬಗ್ಗೆ ಕ್ರಮ ವಹಿಸಿ ಎಂದು ಸಚಿವರು ಸೂಚಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವರು, ಒಂದೆಡೆ ಕೊರೊನಾ ಸಂಕಷ್ಟ ಮತ್ತೊಂದೆಡೆ ನೆರೆಯಿಂದ ಆದಯವಿಲ್ಲದೆ ರೈತರು ಕಂಗೆಟ್ಟಿದ್ದಾರೆ. ಈ ಸಮಯದಲ್ಲಿ ಪಶುಸಂಗೋಪನೆ ಒಂದೇ ರೈತರಿಗೆ ಜೀವನಾಧಾರವಾಗಿದೆ. ಈಗ ಕಲ್ಯಾಣ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ‘ಲಂಪಿ ಸ್ಕಿನ್’ ಕಾಯಿಲೆ ಕಂಡು ಬಂದಿದ್ದು, ದನ-ಕರುಗಳ ಮೈಮೇಲೆ ಗುಳ್ಳೆ ಬರುವುದು, ಜ್ವರ ಕಾಣಿಸಿಕೊಳ್ಳುವುದು, ಆಹಾರ ಸೇವನೆಯಲ್ಲಿ ಸಮಸ್ಯೆ ಕಂಡು ಬರುತ್ತಿರುವುದರಿಂದ ಪಶುಪಾಲಕರು ಆಂತಂಕಕ್ಕಿಡಾಗಿರುವುದು ತಿಳಿದು ಬಂದಿದೆ. ಇದರ ಬಗ್ಗೆ ಕ್ರಮ ವಹಿಸಿ ಎಂದು ಸೂಚಿಸಿದ್ದಾರೆ.
ರಾಜ್ಯದಲ್ಲಿನ ಪಶು ಸಂಪತ್ತಿಗೆ ಯಾವುದೇ ರೀತಿ ತೊಂದರೆ ಆಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದು, ಲಂಪಿ ಸ್ಕಿನ್ ಮಾತ್ರವಲ್ಲದೆ ಜಾನುವಾರುಗಳಿಗೆ ಎದುರಾಗುವ ಯಾವುದೇ ಕಾಯಿಲೆಗಳಿರಲಿ ಅವುಗಳ ನಿಯಂತ್ರಣಕ್ಕೆ ಇಲಾಖೆಯ ಅಧಿಕಾರಿಗಳು ಸದಾ ಸಜ್ಜಾಗಿರಬೇಕು ಎಂದು ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.