ಬೀದರ್:ಅನರ್ಹ ಶಾಸಕರ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿಗೆ ಏಳು ಸೀಟು ಬರುವುದಿಲ್ಲ. ಅವರೆಲ್ಲರ ಸೊಲು ಖಚಿತ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪೂರ ಭವಿಷ್ಯ ನುಡಿದಿದ್ದಾರೆ.
ಮತ್ತೆ ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ರಚಿಸುವ ಸುಳಿವು ಕೊಟ್ಟ ಬಂಡೆಪ್ಪ ಕಾಶಂಪೂರ
ಉಪಚುನಾವಣೆಯಲ್ಲಿ ಬಿಜೆಪಿಗೆ ಏಳು ಕ್ಷೇತ್ರಗಳಲ್ಲಿ ಗೆಲ್ಲುವುದು ಕಷ್ಟವೆಂದು ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪೂರ, ರಾಜ್ಯದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ ರಚನೆ ಆದರೂ ಆಗಬಹುದು. ರಾಜ್ಯದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ ರಚನೆ ಆದರೂ ಆಗಬಹುದು. ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸುಳಿವನ್ನು ಅವರು ನೀಡಿದ್ದಾರೆ.
ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ ರಚನೆ ಆದರೂ ಆಗಬಹುದು. ಬಿಜೆಪಿ-ಜೆಡಿಎಸ್ ಸೇರಿ ಸರ್ಕಾರ ರಚಿಸುವ ಸುಳಿವು ನೀಡಿದ್ದು, 'ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಪರಿಸ್ಥಿತಿ ನಿರ್ಮಾಣವಾಗಿದೆ.ಅನರ್ಹ ಶಾಸಕರನ್ನು ಸೋಲಿಸುವುದೇ ನಮ್ಮ ಗುರಿ' ಎಂದರು.
ಸದ್ಯದ ಮಟ್ಟಿಗೆ ಸರ್ಕಾರವು ಸುರಕ್ಷಿತವಾಗಿಲ್ಲ. ಪಕ್ಷಾಂತರ ಮಾಡಿದ ಅನರ್ಹ ಶಾಸಕರು ದೇಶದಲ್ಲಿ ಕೆಟ್ಟ ಸಂಪ್ರದಾಯನ್ನು ಹುಟ್ಟು ಹಾಕಿದ್ದು, ಅವರಿಗೆ ಮತದಾರರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ. ಇಂತಹ ನೀಚ ಕೆಲಸಕ್ಕೆ ಯಾವುದೇ ರಾಜಕಾರಣಿ ಕೈ ಹಾಕಬಾರದು. ಉಪಚುನಾವಣೆ ಫಲಿತಾಂಶದ ಬಳಿಕ ಏನಾಗುತ್ತೆ ಕಾದು ನೋಡೋಣ ಎಂದು ಹೇಳಿದರು.