ಬಸವಕಲ್ಯಾಣ: ಕಟ್ಟಡ ಕಾರ್ಮಿಕರಿಗಾಗಿ ರಾಜ್ಯ ಸರ್ಕಾರ ಘೋಷಿಸಿದ ಕೋವಿಡ್ ಪರಿಹಾರ ಹಣವನ್ನು ತಕ್ಷಣ ಬಿಡುಗಡೆ ಮಾಡಿ, ಕಾರ್ಮಿಕರ ಖಾತೆಗೆ ಜಮಾ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಟಿ.ನಾರಾಯಣ ಗೌಡ ಬಣ ಒತ್ತಾಯಿಸಿದೆ.
ಕಟ್ಟಡ ಕಾರ್ಮಿಕರ ಕೋವಿಡ್ ಪರಿಹಾರ ಹಣ ಬಿಡುಗಡೆಗೆ ಕರವೇ ಒತ್ತಾಯ - Karnataka rakshana vedike
ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರ ಘೋಷಿಸಿದ ಕೋವಿಡ್-19 ಪರಿಹಾರ ಹಣವನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಟಿ.ನಾರಾಯಣ ಗೌಡ ಬಣ ಆಗ್ರಹಿಸಿದೆ.
![ಕಟ್ಟಡ ಕಾರ್ಮಿಕರ ಕೋವಿಡ್ ಪರಿಹಾರ ಹಣ ಬಿಡುಗಡೆಗೆ ಕರವೇ ಒತ್ತಾಯ Appeal](https://etvbharatimages.akamaized.net/etvbharat/prod-images/768-512-09:45:32:1594527332-kn-bdr-11-3-karave-demanded-release-of-compensation-money-from-building-workers-kac10003-11072020214758-1107f-1594484278-1080.jpg)
ವೇದಿಕೆ ಪದಾಧಿಕಾರಿಗಳ ನಿಯೋಗದಿಂದ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಇಲ್ಲಿನ ಕಾರ್ಮಿಕರ ನಿರೀಕ್ಷಕರ ಕಚೇರಿಗೆ ಸಲ್ಲಿಸಿ, ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿಶೇಷ ಪ್ಯಾಕೇಜ್ ಯೋಜನೆಯಡಿ ಕಟ್ಟಡ ಕಾರ್ಮಿಕರಿಗಾಗಿ ತಲಾ 5 ಸಾವಿರ ರೂ. ಪರಿಹಾರ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಆದರೆ ಕೆಲವರ ಖಾತೆಗೆ ಮಾತ್ರ ಹಣ ಜಮಾ ಆಗಿದ್ದು, ಉಳಿದವರ ಖಾತೆಗೆ ಜಮಾ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಪರಿಹಾರದ ಹಣಕ್ಕಾಗಿ ಕಟ್ಟಡ ಕಾರ್ಮಿಕರು ದಿನನಿತ್ಯ ತಾಲೂಕು ಕಚೇರಿ ಮತ್ತು ಬ್ಯಾಂಕ್‌ಗೆ ಅಲೆಯುತ್ತಿದ್ದಾರೆ. ಕಾರ್ಮಿಕರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲಾ ಕಟ್ಟಡ ಕಾರ್ಮಿಕರ ಖಾತೆಗೆ ಪರಿಹಾರದ ಹಣವನ್ನು ಜಮಾ ಮಾಡಲು ಕ್ರಮ ಕೈಗೊಳ್ಳಬೇಕು ಮನವಿ ಮಾಡಿದ್ದಾರೆ.