ಬೀದರ್/ಬಸವಕಲ್ಯಾಣ: ಮಾರಕ ಕೊರೊನಾ ಭೀತಿಯಿಂದ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕುಟುಂಬಗಳಿಗೆ ಕೆಲಸ ಕಲ್ಪಿಸಲು ಇಲ್ಲಿನ ತಾಲೂಕು ಪಂಚಾಯಿತಿ ಮುಂದಾಗಿದೆ. ಈ ಹಿನ್ನೆಲೆ ಗ್ರಾಮ ಪಂಚಾಯಿತಿಗಳ ಮೂಲಕ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಖಾಲಿ ಕೈಗಳಿಗೆ ಕೆಲಸ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ಉದ್ಯೋಗ ಖಾತ್ರಿ ಯೋಜನೆ ಮೂಲಕ ಬಸವಕಲ್ಯಾಣದ ಕೂಲಿ ಕಾರ್ಮಿಕರಿಗೆ ಕೆಲಸ - ಕೂಲಿ ಕಾರ್ಮಿಕರಿಗೆ ನೆರವು
ತಾಲೂಕಿನ ಹಿರನಾಗಾಂವ, ಮಂಠಾಳ ಹಾಗೂ ಹಾರಕೂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರ ಕೈಗಳಿಗೆ ಕೆಲಸ ನೀಡಲಾಗಿದೆ.
ತಾಲೂಕಿನ ಹಿರನಾಗಾಂವ, ಮಂಠಾಳ ಹಾಗೂ ಹಾರಕೂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರ ಕೈಗಳಿಗೆ ಕೆಲಸ ನೀಡಲಾಗಿದ್ದು, ಕೆರೆಗಳ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಕೊರೊನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಜಾರಿಗೊಳಿಸಲಾದ ಲಾಕ್ಡೌನ್ನಿಂದಾಗಿ ಕೆಲಸವಿಲ್ಲದೆ ಮನೆಯಲ್ಲಿ ಕುಳಿತಿರುವ ಕಾರ್ಮಿಕ ಕುಟುಂಬಗಳಿಗೆ ಆರ್ಥಿಕ ಸಹಾಯ ಕಲ್ಪಿಸುವ ಉದ್ದೇಶದಿಂದ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಪಾಡುವ ಜೊತೆಗೆ ಸ್ವಯಂ ಸುರಕ್ಷತೆಗೆ ಕಾಳಜಿ ವಹಿಸಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣ ಅಧಿಕಾರಿ ಮಡೋಳಪ್ಪ ಪಿ.ಎಸ್. ಸಲಹೆ ನೀಡಿದ್ದಾರೆ.