ಬೀದರ್:ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು, 200 ಲೀಟರ್ ಕಳ್ಳಭಟ್ಟಿ ಕೊಳೆ ನಾಶ ಮಾಡಿದ್ದಾರೆ.
ಅಕ್ರಮ ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ..200 ಲೀಟರ್ ಕೊಳೆ ನಾಶ - ಬೀದರ್ ಸುದ್ದಿ
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೊಕ್ರಾಣ ತಾಂಡದಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು, 200 ಲೀಟರ್ ಕಳ್ಳಭಟ್ಟಿ ನಾಶ ಮಾಡಿ, 2 ಲೀಟರ್ ಕಳ್ಳಭಟ್ಟಿ ವಶಪಡಿಸಿಕೊಂಡಿದ್ದಾರೆ.
ಅಕ್ರಮ ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ..200 ಲೀಟರ್ ಕೊಳೆ ನಾಶ
ಜಿಲ್ಲೆಯ ಔರಾದ್ ತಾಲೂಕಿನ ಹೊಕ್ರಾಣ ತಾಂಡದಲ್ಲಿ ಕೆಲವರು ಲಾಕ್ಡೌನ್ ಸಂದರ್ಭವನ್ನೆ ಬಂಡವಾಳ ಮಾಡಿಕೊಂಡು ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ತಯಾರಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು, 200 ಲೀಟರ್ ಕಳ್ಳಭಟ್ಟಿ ನಾಶ ಮಾಡಿ, 2 ಲೀಟರ್ ಕಳ್ಳಭಟ್ಟಿ ವಶಪಡಿಸಿಕೊಂಡಿದ್ದಾರೆ.
ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದು, ಈ ಕುರಿತು ಹೊಕ್ರಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.