ಬಸವಕಲ್ಯಾಣ: ಅನ್ಯ ರಾಜ್ಯದ ಯುವತಿಯರನ್ನು ಕರೆತಂದು ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.
ಅನ್ಯ ರಾಜ್ಯದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ... ಬಸವಕಲ್ಯಾಣದಲ್ಲಿ ಪೊಲೀಸ್ ದಾಳಿ - ವೇಶ್ಯಾವಾಟಿಕೆ ನಡೆಸುತ್ತಿದ್ದವರ ಬಂಧನ
ಬಸವಕಲ್ಯಾಣ ಸಂಚಾರಿ ಠಾಣೆ ಪಿಎಸ್ಐ ಹಾಗೂ ಪೊಲೀಸ್ ಸಿಬ್ಬಂದಿ ತಂಡ, ವೇಶ್ಯಾವಾಟಿಕೆ ನಡೆಸುತ್ತಿದ್ದ 3 ಜನ ಆರೋಪಿಗಳನ್ನು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.
ಸಿಪಿಐ ನ್ಯಾಮಗೌಡರ ನೇತೃತ್ವದಲ್ಲಿ ನಗರದ ಮುಖ್ಯ ರಸ್ತೆಯಲ್ಲಿರುವ ಲಾಡ್ಜ್ವೊಂದರದ ಮೇಲೆ ದಾಳಿ ನಡೆಸಿದ ಸಂಚಾರಿ ಠಾಣೆ ಪಿಎಸ್ಐ ಹಾಗೂ ಪೊಲೀಸ್ ಸಿಬ್ಬಂದಿ ತಂಡ, ವೇಶ್ಯಾವಾಟಿಕೆ ನಡೆಸುತ್ತಿದ್ದ 3 ಜನ ಆರೋಪಿಗಳನ್ನು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಲಾಡ್ಜ್ ಮಾಲೀಕನ ಪುತ್ರ ಶ್ರೀನಿವಾಸ ತ್ರಿಮುಖೆ, ರಮೇಶ ಮಹಾಗಾಂವ್, ಅರುಣಕುಮಾರ್ ಎನ್ನುವರನ್ನು ಬಂಧಿಸಲಾಗಿದೆ. ಉಳಿದವರ ಬಂಧನಕ್ಕಾಗಿ ಪೊಲೀಸರು ಜಾಲ ಬೀಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಇಬ್ಬರು ಯುವತಿಯರು ಹಾಗೂ ತೆಲಂಗಾಣ ಮತ್ತು ಕಲಬುರಗಿ ಮೂಲದ ತಲಾ ಒಬ್ಬರು ಯುವತಿಯರನ್ನು ನಗರಕ್ಕೆ ಕರೆ ತಂದು ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗ್ತಿದೆ. ಜೊತೆಗೆ ಹಲವು ತಿಂಗಳುಗಳಿಂದ ಇಲ್ಲಿ ಈ ದಂಧೆ ನಡೆಸಲಾಗುತ್ತಿತ್ತು ಎನ್ನುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೇಶ್ಯಾವಾಟಿಕೆಯಿಂದ ರಕ್ಷಿಸಲಾದ ನಾಲ್ವರು ಯುವತಿಯರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.