ಕರ್ನಾಟಕ

karnataka

ETV Bharat / state

ಕ್ವಾರಂಟೈನ್​ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಬಿ.ನಾರಾಯಣರಾವ್​

ಮಹಾಮಾರಿ ಕೊರೊನಾ ಭೀತಿಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಹೊರ ರಾಜ್ಯದಿಂದ ಆಗಮಿಸಿದ ಪ್ರತಿಯೊಬ್ಬರನ್ನು ಕ್ವಾರಂಟೈನ್ ಮಾಡಲಾಗಿದೆ. ಕ್ವಾರಂಟೈನ್ ಕೇಂದ್ರಗಳಿಗೆ ಶಾಸಕ ಬಿ.ನಾರಾಯಣರಾವ್​ ಭೇಟಿ ನೀಡಿ ಪರಿಶೀಲಿಸಿದರು.

B. Narayanarawa visited and reviewed Quarantine centers
ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಬಿ.ನಾರಾಯಣರಾವ

By

Published : Apr 29, 2020, 3:20 PM IST

ಬಸವಕಲ್ಯಾಣ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಅನ್ಯ ರಾಜ್ಯಗಳಿಂದ ಆಗಮಿಸಿದ ಕಾರ್ಮಿಕರನ್ನು ಇರಿಸಿರುವ ಕ್ವಾರಂಟೈನ್ ಕೇಂದ್ರಗಳಿಗೆ ಶಾಸಕ ಬಿ.ನಾರಾಯಣರಾವ್​ ಭೇಟಿ ನೀಡಿ ಪರಿಶೀಲಿಸಿದರು.

ಮಹಾಮಾರಿ ಕೊರೊನಾ ಭೀತಿಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಹೊರ ರಾಜ್ಯದಿಂದ ಆಗಮಿಸಿದ ಪ್ರತಿಯೊಬ್ಬರನ್ನು ಕ್ವಾರಂಟೈನ್ ಮಾಡಲಾಗಿದೆ. ಕ್ವಾರಂಟೈನ್‌ನಲ್ಲಿರುವವರು ಹೆದರುವ ಅವಶ್ಯಕತೆ ಇಲ್ಲ. ವೈದ್ಯರ ಸಲಹೆ, ಸೂಚನೆಗಳನ್ನು ಪಾಲಿಸುವ ಜೊತೆಗೆ ವಸತಿ ನಿಲಯದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಶಾಸಕರು ಸಲಹೆ ನೀಡಿದರು.

ಕ್ವಾರಂಟೈನ್ ಕೇಂದ್ರಗಳಲ್ಲಿ ಇರುವ ಜನರಿಗೆ ಅನ್ನ, ನೀರು ಸೇರಿದಂತೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ವೈದ್ಯರನ್ನು ಕರೆಸಿ ಮೇಲಿಂದ ಮೇಲೆ ಆರೋಗ್ಯ ತಪಾಸಣೆ ನಡೆಸಬೇಕು ಎಂದು ಸ್ಥಳದಲಿದ್ದ ಕ್ವಾರಂಟೈನ್ ಕೇಂದ್ರಗಳ ತಾಲೂಕು ನೋಡಲ್ ಅಧಿಕಾರಿ ಡಾ. ಮಂಜುನಾಥ ಮುಂಗಳೆ ಅವರಿಗೆ ಸೂಚಿಸಿದರು.

ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಬಿ.ನಾರಾಯಣರಾವ್​

ನಗರದಲ್ಲಿನ ವಸತಿ ನಿಲಯಗಳು ಹಾಗೂ ತಾಲೂಕಿನ ಮುಡಬಿ, ಮಂಠಾಳ ವಿವಿಧ ವಸತಿ ಶಾಲೆಗಳಲ್ಲಿ ತಾಲೂಕು ಆಡಳಿತದಿಂದ ಆರಂಭಿಸಲಾಗಿರುವ ಕ್ವಾರಂಟೈನ್ ಕೇಂದ್ರಗಳಲ್ಲಿ ಅನ್ಯ ರಾಜ್ಯಗಳಿಂದ ಆಗಮಿಸಿರುವ ಜನರನ್ನು ಇರಿಸಿ ಕ್ವಾರಂಟೈನ್ ಮಾಡಲಾಗುತ್ತಿದೆ. 12 ವಸತಿ ನಿಲಯಗಳಲ್ಲಿ ಒಟ್ಟು 300ಕ್ಕೂ ಅಧಿಕ ಜನರನ್ನು ದಾಖಲಿಸಲಾಗಿದೆ. ಉದ್ಯೋಗ ಸೇರಿದಂತೆ ವಿವಿಧ ಕಾರಣಗಳಿಂದ ಹೊರ ರಾಜ್ಯಗಳಗೆ ತೆರಳಿ ಮರಳಿ ಗ್ರಾಮಕ್ಕೆ ಆಗಮಿಸುತ್ತಿರುವವರನ್ನು ಕ್ವಾರಂಟೈನ್ ಕೇಂದ್ರಕ್ಕೆ ದಾಖಲಿಸುವ ಜೊತೆಗೆ 14 ದಿನಗಳ ಅವಧಿ ಪೂರೈಸಿದ ಜನರನ್ನು ಬಿಡುಗಡೆ ಮಾಡಲಾಗುತ್ತಿದೆ. ಇನ್ನು ಈ ನಡುವೆ ಕೆಮ್ಮು, ಜ್ವರ ಸೇರಿದಂತೆ ಕೊರೊನಾಗೆ ಸಂಬಂಧಿಸಿದ ಲಕ್ಷಣಗಳು ಕಂಡು ಬರುವ ಜನರಿಗೆ ತಕ್ಷಣ ತಾಲೂಕು ಆಸ್ಪತ್ರೆಗೆ ರವಾನಿಸಲಾಗುತ್ತಿದೆ.

ABOUT THE AUTHOR

...view details