ಬೀದರ್:ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ 25 ಸಾವಿರ ಮತಗಳ ಅಂತರದಿಂದ ಗೆದ್ದೇ ಗೆಲ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಔರಾದ್ ತಾಲೂಕಿನ ಘಮಸುಬಾಯಿ ತಾಂಡದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಝೀರೋ ಬಿಜೆಪಿ ಹೀರೋ ಆಗಲಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಜೆಡಿಎಸ್ ನಾಯಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರಗೆ ಟಿಕೆಟ್ ಮಾರಾಟ ಆಗಿದೆ ಎಂದು ಹೇಳಿರುವುದು ಖಂಡಿಸುತ್ತೆನೆ. ಬಸವಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿ 5,000 ಮತಗಳ ಗಡಿ ದಾಟುವುದಿಲ್ಲ ಅವರು ಬರೀ ಹೇಳ್ತಾನೆ ಹೊಗ್ತಾರೆ ಎಂದು ಟಾಂಗ್ ನೀಡಿದರು.
ಬಸವಕಲ್ಯಾಣ ಬಿಜೆಪಿಯಲ್ಲಿ ಅಸಮಾಧಾನ ಇದೆ ಟಿಕೇಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ್ ಖೂಬಾ ಅವರ ಮನವೊಲಿಕೆ ಮಾಡ್ತಿನಿ. ಪಕ್ಷದ ಗೆಲುವಿಗೆ ಶ್ರಮಿಸುತ್ತೇವೆ ಎಂದು ಚವ್ಹಾಣ ಹೇಳಿದರು.