ಬಸವಕಲ್ಯಾಣ:ಸಿಎಎ, ಎನ್‌ಆರ್‌ಸಿ ವಿರೋಧಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದಿಂದ ನಗರದಲ್ಲಿ ಬೃಹತ್ ಕ್ಯಾಂಡಲ್ ಮಾರ್ಚ್ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಸಿಎಎ ವಿರೋಧಿಸಿ ಬಸವಕಲ್ಯಾಣದಲ್ಲಿ ಕ್ಯಾಂಡಲ್ ಮಾರ್ಚ್ - ಸಿಎಎ ವಿರೋಧಿಸಿ ಡಬ್ಲೂಪಿಐನಿಂದ ಪ್ರತಿಭಟನೆ
ಸಿಎಎ, ಎನ್‌ಆರ್‌ಸಿ ವಿರೋಧಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದಿಂದ ನಗರದಲ್ಲಿ ಬೃಹತ್ ಕ್ಯಾಂಡಲ್ ಮಾರ್ಚ್ ನಡೆಸಿ ಪ್ರತಿಭಟನೆ ನಡೆಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸಿಎಎ ಹಾಗೂ ಎನ್‌ಆರ್‌ಸಿ ವಿರುದ್ಧ ಘೋಷಣೆ ಕೂಗಿ ಕಾಯ್ದೆ ವಾಪಸ್ ಪಡೆಯುವಂತೆ ಒತ್ತಾಯಿಸಿದರು. ಬೇರೆ ದೇಶದವರನ್ನು ಇಲ್ಲಿಗೆ ಕರೆತಂದು ರಾಷ್ಟ್ರೀಯ ಪೌರತ್ವ ನೀಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದಕ್ಕೆ ನಮ್ಮ ವಿರೋಧವಿದೆ. ಜಾತ್ಯಾತೀತ ರಾಷ್ಟ್ರದಲ್ಲಿ ಜಾತಿ, ಧರ್ಮದ ಆಧಾರದಲ್ಲಿ ಕಾಯ್ದೆ ಜಾರಿಗೆ ತರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಪ್ಯಾಂಥರ್ ಅಧ್ಯಕ್ಷ ರವಿ ಗಾಯಕವಾಡ ಮಾತನಾಡಿ, ದೇಶದಲ್ಲಿ ಅನೇಕ ಸಮಸ್ಯೆಗಳಿವೆ. ಅಭಿವೃದ್ಧಿ ಕಡೆ ಗಮನ ಹರಿಸಬೇಕಿರುವ ಸರ್ಕಾರ ಧರ್ಮದ ಆಧಾರದಲ್ಲಿ ಕಾಯ್ದೆಗಳನ್ನು ರೂಪಿಸಿ, ಕೋಮು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದರು.