ಬೀದರ್:ಬೆಂಗಳೂರಿನ ಟಿ.ಜಿ ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ವರದಿ ಮಾಡಲು ತೆರಳಿದ್ದ ಮಾಧ್ಯಮಗಳ ಮೇಲೆ ದುಷ್ಕರ್ಮಿಗಳು ನಡೆಸಿದ ಹಲ್ಲೆ ಪ್ರಕರಣವನ್ನು ಖಂಡಿಸಿ ಬೀದರ್ ಜಿಲ್ಲಾ ಪತ್ರಕರ್ತರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಮಾಧ್ಯಮದವರ ಮೇಲಿನ ಹಲ್ಲೆ ಖಂಡಿಸಿ ಬೀದರ್ನಲ್ಲಿ ಪ್ರತಿಭಟನೆ - Protest in Bidar
ಮಾಧ್ಯಮದವರ ಮೇಲಿನ ಹಲ್ಲೆ ಖಂಡಿಸಿ ಬೀದರ್ ಜಿಲ್ಲಾ ಪತ್ರಕರ್ತರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ವಾರ್ತಾ ಇಲಾಖೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಕಪ್ಪು ಪಟ್ಟಿ ಧರಿಸಿ, ಮೌನ ಪ್ರತಿಭಟನೆ ನಡೆಸಿದರು.
ನಗರದ ವಾರ್ತಾ ಇಲಾಖೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಕಪ್ಪು ಪಟ್ಟಿ ಧರಿಸಿ, ಮೌನ ಪ್ರತಿಭಟನೆ ನಡೆಸಿದರು. ಬಳಿಕ ದುಷ್ಕೃತ್ಯ ಎಸಗಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್ ಮೂಲಕ ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ಮಂಗಳವಾರ ರಾತ್ರಿ ಬೆಂಗಳೂರಿನ ಟಿ.ಜೆ ಹಳ್ಳಿಯಲ್ಲಿ ನಡೆದ ಗಲಭೆ ಸುದ್ದಿ ಮಾಡಲು ಹೋಗಿದ್ದ ಪತ್ರಕರ್ತರು, ಕ್ಯಾಮರಾಮನ್ಗಳು ಸೇರಿದಂತೆ ಕ್ಯಾಮರಾ ಮತ್ತು ಲೈವ್ ಕಿಟ್, ಕಾರು ನಾಶಗೊಳಿಸಿದ ಕಿಡಿಗೇಡಿಗಳ ಕೃತ್ಯ ಅಮಾನವೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.