ಬೀದರ್: ದೇಶ ವಿರೋಧಿ ಭಾವನೆಯನ್ನು ಕೆರಳಿಸಿರುವ ಶಾಹೀನ್ ಶಿಕ್ಷಣ ಸಂಸ್ಥೆಯನ್ನು ಬಂದ್ ಮಾಡಬೇಕೆಂದು ಆಗ್ರಹಿಸಿ, ನಗರದಲ್ಲಿ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶಾಹೀನ್ ಶಿಕ್ಷಣ ಸಂಸ್ಥೆ ಬಂದ್ಗೆ ಆಗ್ರಹಿಸಿ ಭಜರಂಗದಳ ಪ್ರತಿಭಟನೆ.. - bidar Bhajarangadala protest
ಬೀದರ್ನಲ್ಲಿ ದೇಶ ವಿರೋಧಿ ಭಾವನೆಯನ್ನು ಕೆರಳಿಸಿರುವ ಶಾಹೀನ್ ಶಿಕ್ಷಣ ಸಂಸ್ಥೆಯನ್ನು ಬಂದ್ ಮಾಡಬೇಕೆಂದು ಆಗ್ರಹಿಸಿ, ನಗರದಲ್ಲಿ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶಾಹಿನ್ ಶಿಕ್ಷಣ ಸಂಸ್ಥೆ ಬಂದ್ ಗೆ ಆಗ್ರಹಿಸಿ ಭಜರಂಗದಳ ಪ್ರತಿಭಟನೆ..
ನಗರದ ಸರಸ್ವತಿ ಶಾಲೆಯಿಂದ ಪ್ರತಿಭಟನಾ ರ್ಯಾಲಿ ಆರಂಭಿಸಿ, ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿ ಪ್ರತಿಭಟನೆ ನಡೆಸಿದ್ರು. ಜಿಲ್ಲಾಧಿಕಾರಿ ಕಚೇರಿ ಬಳಿ ಶಿವಾಜಿ ವೃತ್ತದಲ್ಲಿ ಕೆಲ ಕಾಲ ಶಾಹೀನ್ ಶಿಕ್ಷಣ ಸಂಸ್ಥೆ ವಿರುದ್ದ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು, ಶಿವಾಜಿ ವೃತ್ತದ ಬಳಿ ಶಾಹೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖಾದೀರ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ರು. ಕೂಡಲೇ ಶಾಹೀನ್ ಶಿಕ್ಷಣ ಸಂಸ್ಥೆಯ ಪರವಾನಗಿ ರದ್ದು ಗೊಳಿಸಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ರು.