ಬೀದರ್ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಉಳಿಕೆ ಮತ್ತು ಕಲ್ಯಾಣ ಕರ್ನಾಟಕ ವೃಂದದಿಂದ ಈ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 9 ಹುದ್ದೆಗಳ ಭರ್ತಿ ನಡೆಯಲಿದ್ದು, ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ:ಬೀದರ್ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 9 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಲ್ಯಾಣ ಕರ್ನಾಟಕ ವೃಂದದಿಂದ 5 ಹುದ್ದೆ ಖಾಲಿ ಇದ್ದು, ಉಳಿಕೆ ವೃಂದದಿಂದ 4 ಹುದ್ದೆಗಳ ನೇಮಕಾತಿ ನಡೆಯಲಿದೆ.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರ ಲಿಪಿ ಮತ್ತು ಬೆರಳಚ್ಚು ಅರ್ಹತೆ ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವೇತನ: ಈ ಹುದ್ದೆಗಳಿಗೆ ಮಾಸಿಕ 27,650-52,650 ರೂ. ವೇತನ ನಿಗದಿಸಲಾಗಿದೆ.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷದ ವಯೋಮಿತಿ ಮೀರಿರಬಾರದು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಸಲಾಗಿದ್ದು, ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ನಿಗದಿಸಲಾಗಿದ್ದು, ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಕಂಪ್ಯೂಟರ್/ ಬೆರಳಚ್ಚು ಯಂತ್ರ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ನವೆಂಬರ್ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್ 6 ಆಗಿದೆ. ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಕೆಗೆ bidar.dcourts.gov.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: Court Jobs: ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ.. ಟೈಪಿಸ್ಟ್, ಜವಾನ ಹುದ್ದೆಗಳ ಭರ್ತಿ