ಬೀದರ್: ಅತಿವೃಷ್ಟಿ ಪೀಡಿತ ಪ್ರದೇಶಗಳಲ್ಲಿ ಸಾರ್ವಜನಿಕರ ಸಹಾಯಕ್ಕೆ ಅಧಿಕಾರಿಗಳು ಸ್ಪಂದಿಸುವ ನಿಟ್ಟಿನಲ್ಲಿ ವಾಸ್ಯವ್ಯ ಕಡ್ಡಾಯ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಆದೇಶ ಹೊರಡಿಸಿದ್ದಾರೆ.
ಅತಿವೃಷ್ಟಿ ಪ್ರದೇಶಗಳಲ್ಲಿ ಅಧಿಕಾರಿಗಳ ವಾಸ್ತವ್ಯ ಕಡ್ಡಾಯ: ಬೀದರ್ ಡಿಸಿ - Bidar DC mandates the stay of officers in overcrowded areas
ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿ ಪೀಡಿತ ಕೇಂದ್ರ ಸ್ಥಾನದಲ್ಲಿ ಅಧಿಕಾರಿಗಳ ವಾಸ್ತವ್ಯ ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಆದೇಶ ಹೊರಡಿಸಿದ್ದಾರೆ.
![ಅತಿವೃಷ್ಟಿ ಪ್ರದೇಶಗಳಲ್ಲಿ ಅಧಿಕಾರಿಗಳ ವಾಸ್ತವ್ಯ ಕಡ್ಡಾಯ: ಬೀದರ್ ಡಿಸಿ dsd](https://etvbharatimages.akamaized.net/etvbharat/prod-images/768-512-8842402-thumbnail-3x2-vis.jpg)
ಬೀದರ್ ಡಿಸಿ ಆದೇಶ
ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಿಲ್ಲಾ ಮತ್ತು ತಾಲೂಕುಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ ಹೂಡಿ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದವರ ಪರಿಸ್ಥಿರಿ ಕುರಿತು ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಜಿಲ್ಲೆಯಾದ್ಯಂತ ಅತಿವೃಷ್ಟಿ ಹಾನಿ ಕುರಿತು ಜಿಲ್ಲಾಧಿಕಾರಿ ರಾಮಚಂದ್ರನ್ ವಿಶೇಷ ತಂಡ ರಚನೆ ಮಾಡಿದ್ದಾರೆ. ಮಳೆಯಿಂದ ಆಸ್ತಿ, ಬೆಳೆ ಹಾಗೂ ಸಾರ್ವಜನಿಕ ಆಸ್ತಿ ಹಾನಿಯ ಸಮಗ್ರ ವರದಿ ಹಾಗೂ ಅತಿವೃಷ್ಟಿ ನಿರ್ವಹಣೆ ಮಾಡಲು ಸೂಚನೆ ನೀಡಿದ್ದಾರೆ.