ಬೀದರ್:ಸತತ ಸಾರ್ವಜನಿಕ ಸಂಪರ್ಕಕ್ಕೆ ಒಳಗಾಗಿ ಕರ್ತವ್ಯ ನಿರತ ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್.ಆರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಪರೀಕ್ಷಾ ವರದಿಯಿಂದ ಧೃಡಪಟ್ಟಿದೆ.
ಬೀದರ್ ಡಿಸಿ ರಾಮಚಂದ್ರನ್.ಆರ್ ಅವರಿಗೆ ಕೊರೊನಾ ಪಾಸಿಟಿವ್ - ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್.ಆರ್ ಅವರಿಗೆ ಕೊವಿಡ್
ನಿರಂತರವಾಗಿ ಜನರ ಸಂಪರ್ಕದಲ್ಲಿ ಇರುತ್ತಿದ್ದ ಬೀದರ್ ಜಿಲ್ಲಾಧಿಕಾರಿಗೆ ಈಗ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಾವುದೇ ರೋಗ ಲಕ್ಷಣಗಳು ಕಂಡು ಬರದಿದ್ದರೂ ಬ್ರೀಮ್ಸ್ ಆಸ್ಪತ್ರೆ ವೈದ್ಯರ ಸಲಹೆಯಂತೆ ಜಿಲ್ಲಾಧಿಕಾರಿ ರಾಮಚಂದ್ರನ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಕೊರೊನಾ ವಿರುದ್ಧದ ಸಮರದಲ್ಲಿ ಜಿಲ್ಲಾಡಳಿತದ ಮುಖ್ಯಸ್ಥರಾಗಿ ಮುಂಚೂಣಿಯಲ್ಲಿದ್ದ ಜಿಲ್ಲಾಧಿಕಾರಿಗಳ ಪ್ರಾಥಮಿಕ ಸಂಪರ್ಕದಲ್ಲಿ ಬಂದ ಎಲ್ಲರಿಗೂ ಪರೀಕ್ಷೆಗೆ ಒಳಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಚಿಕಿತ್ಸೆ ಹಂತದಲ್ಲೇ ಜಿಲ್ಲಾಧಿಕಾರಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಬೇಗ ಗುಣಮುಖವಾಗಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಭರಪೂರ ಹಾರೈಕೆಗಳು ಹರಿದು ಬರುತ್ತಿವೆ.