ಬೀದರ್ :ಕೊರೊನಾ ಸೋಂಕು ತಡೆಗೆ ಹಾಕಲಾಗಿದ್ದ ಲಾಕ್ಡೌನ್ನ ಈಗ ತೆರವುಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ. ನಾಳೆಯಿಂದ ಜಿಲ್ಲೆಯಾದ್ಯಂತ ಸ್ವಲ್ಪಮಟ್ಟಿನ ಸಡಿಲಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಹೇಳಿದ್ದಾರೆ. ಮಧ್ಯಾಹ್ನ 2 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯ ವಿಸ್ತರಿಸಲಾಗಿದೆ. ಸಂಜೆ 7 ಗಂಟೆಯಿಂಂದ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತೆ.
ಅಲ್ಲದೇ ವಿಕೇಂಡ್ ಕರ್ಫ್ಯೂ ಕೂಡ ಚಾಲ್ತಿಯಲ್ಲಿರುತ್ತದೆ. ಸಾರ್ವಜನಿಕರು ಅನಗತ್ಯ ಗುಂಪು ಸೇರುವುದು, ಓಡಾಡುವುದನ್ನು ಯಾವುದೇ ಕಾರಣಕ್ಕೂ ಮಾಡಬಾರದು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.