ಬೀದರ್:ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿರುವ ಜಿಲ್ಲಾಡಳಿತ ಹತೋಟಿಗೆ ಬಂದ ಸೋಂಕು ನಿಯಂತ್ರಣದಲ್ಲಿಡಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದು, ಖುದ್ದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ರಸ್ತೆಗೆ ಬಂದು ಮಾಸ್ಕ್ ಧರಿಸದೇ ಓಡಾಡುವವರನ್ನು ಗುರುತಿಸಿ ದಂಡ ಹಾಕಿದ್ದಾರೆ.
ಬೀದರ್: ಮಾಸ್ಕ್ ಹಾಕದೇ ರಸ್ತೆಗೆ ಬರುವವರಿಗೆ ದಂಡ ವಿಧಿಸಿದ ಜಿಲ್ಲಾಧಿಕಾರಿ
ಬೀದರ್ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಿಂದ ಮೋಹನ್ ಮಾರ್ಕೆಟ್, ಬಸ್ ನಿಲ್ದಾಣ ಸೇರಿದಂತೆ ಹಲವಡೆ ಸಂಚಾರ ಮಾಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್ ಅವರು ಮಾಸ್ಕ್ ಧರಿಸದೇ ಇರುವವರಿಗೆ ದಂಡ ವಿಧಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಿಂದ ಮೊಹನ್ ಮಾರ್ಕೆಟ್, ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ಸಂಚಾರ ಮಾಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್, ಮಾಸ್ಕ್ ಧರಿಸದೇ ಇರುವ ಜನರಿಗೆ ಉಚಿತ ಮಾಸ್ಕ್ ವಿತರಿಸಿದಲ್ಲದೇ ಸ್ಥಳದಲ್ಲೆ100 ರುಪಾಯಿ ದಂಡ ವಿಧಿಸಿ, ಜಾಗೃತಿ ಮೂಡಿಸಿದ್ದಾರೆ.
ಕಳೆದ ಮೂರು ವಾರಗಳಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹತೋಟಿಗೆ ಬಂದಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ವಹಿಸದೇ ನಿರ್ಲಕ್ಷ್ಯ ಮಾಡ್ತಿರುವುದು ಜಿಲ್ಲಾಡಳಿತ ಗಮನಿಸಿದೆ. ಬಸ್, ಬೈಕ್ ಮೇಲೆ ಸವಾರಿ ಮಾಡುವ, ಸಾರ್ವಜನಿಕ ಸ್ಥಳಗಳಲ್ಲಿ ಸುತ್ತಾಡುವ ಜನರಿಗೆ ಮಾಸ್ಕ್ ಧರಿಸದೇ ಇರುವುದಕ್ಕೆ ದಂಡ ವಿಧಿಸಿದ್ದಾರೆ. ಈ ಜಾಗೃತಿ ಅಭಿಯಾನ ಜಿಲ್ಲಾದ್ಯಂತ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದ್ದಾರೆ.