ಬೀದರ್:ಧಾರಾಕಾರ ಮಳೆಯಿಂದ ಹುಮನಾಬಾದ್ ತಾಲೂಕಿನ 11 ಗ್ರಾಮಗಳಲ್ಲಿ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟವಾಗಿದ್ದು, ಸ್ಥಳಕ್ಕೆ ಶಾಸಕ ರಾಜಶೇಖರ್ ಪಾಟೀಲ್ ಹಾಗೂ ಜಿಲ್ಲಾಧಿಕಾರಿ ರಾಮಚಂದ್ರನ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ಹುಮನಾಬಾದ್ ತಾಲೂಕಿನ ಅಲ್ಲೂರು, ನಿಂಬೂರ್, ಬೋತಗಿ, ನಂದಗಾಂವ್ ಸೇರಿದಂತೆ 11 ಗ್ರಾಮಗಳಲ್ಲಿ ಮಳೆ ಮಾಡಿದ ಅವಾಂತರವನ್ನು ಪರಿಶೀಲನೆ ನಡೆಸಿ ಹಾನಿಗೊಳಗಾದ ರೈತರ, ಜಮೀನು, ಬೆಳೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಯ ಸಮಗ್ರ ವಿವರಣೆ ನೀಡುವಂತೆ ಜಿಲ್ಲಾಧಿಕಾರಿ ರಾಮಚಂದ್ರನ್ ಸೂಚನೆ ನೀಡಿದರು.