ಬೀದರ್:ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಗದಲ ಗ್ರಾಮದ ವಿವಿಧ ಪಕ್ಷಗಳ ಕಾರ್ಯಕರ್ತರು, ಮಾಜಿ ಸಚಿವರು ಇಂದು ಶಾಸಕರ ಬಂಡೆಪ್ಪ ಖಾಶೆಂಪುರ್ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಯಾದರು. ಅವರನ್ನು ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಶಾಸಕರು ಬರಮಾಡಿಕೊಂಡರು.
ಈ ವೇಳೆ ಮಾತನಾಡಿದ ಬಂಡೆಪ್ಪ ಖಾಶೆಂಪುರ್, ಜೆಡಿಎಸ್ ರೈತರು, ಬಡವರು, ಶ್ರಮಿಕರ ಪರವಾಗಿರುವ ಪಕ್ಷ. ಬೇರೆ ಪಕ್ಷದಿಂದ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತಸದ ವಿಷಯ. ಜೆಡಿಎಸ್ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ, ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಅವರು ಕರೆ ಕೊಟ್ಟರು.
ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಶಕ್ತಿ ತುಂಬಬೇಕಾಗಿದೆ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ತರಬೇಕಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೆಲಸ ಮಾಡಬೇಕು. ನಮ್ಮ ಪಕ್ಷದ ಅಧಿಕಾರಾವಧಿ ವೇಳೆ ನಾಡಿನ ಒಳಿತಿಗಾಗಿ ಜಾರಿಗೊಳಿಸಿದ ಯೋಜನೆಗಳ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಸಬೇಕು. ತಳ ಹಂತದಿಂದ ನಾವು ಪಕ್ಷ ಸಂಘಟನೆ ಮಾಡಬೇಕು. ಮನೆಮನೆಗೂ ಜೆಡಿಎಸ್ ತತ್ವ ಸಿದ್ಧಾಂತಗಳ ಬಗ್ಗೆ, ಅಭಿವೃದ್ಧಿ ಕೆಲಸಗಳ ಬಗ್ಗೆ ತಿಳಿಹೇಳಬೇಕು. ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರೂ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕಾಗಿದೆ. ಎಲ್ಲರೂ ಸೇರಿ ಪಕ್ಷವನ್ನು ಬಲಿಷ್ಠಗೊಳಿಸೋಣ ಎಂದು ಒಗ್ಗಟ್ಟಿನ ಮಂತ್ರ ಜಪಿಸಿದರು.
ಇದನ್ನೂ ಓದಿ: ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದದ ಸಾಧಕ-ಬಾಧಕಗಳ ಚರ್ಚೆ ನಡೆಸುತ್ತೇನೆ: ಬೊಮ್ಮಾಯಿ