ಬೀದರ್:ಕಳ್ಳರು ಚಾಪೆ ಕೆಳಗೆ ನುಸುಳಿದ್ರೇ, ಪೊಲೀಸರು ರಂಗೋಲಿ ಕೆಳಗೆ ನುಸುಳ್ತಾರೆ. ಅದಕ್ಕೊಂದು ಉದಾಹರಣೆ ಇವತ್ತು ಬೀದರ್ ನಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆ.ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. 6.5 ಕ್ವಿಂಟಲ್ ಗಾಂಜಾ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಲ್ಲದೇ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಜಿಲ್ಲೆಯ ಔರಾದ್ ತಾಲೂಕಿನ ಜಂಬಗಿ ತಾಂಡಾ ಭಾಗದಲ್ಲಿ ಪೊಲೀಸರು ದಾಳಿ ಮಾಡಿದ್ದರು. ತೆಂಗಿನ ಲಾರಿಯಲ್ಲಿ ಲೋಡ್ ಮಾಡಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುವ ವೇಳೆಯಲ್ಲಿ ರೆಂಡ್ ಹ್ಯಾಂಡ್ ಆಗಿ ಪೊಲೀಸರ ಬಲೆಗೆ ದಂಧೆಕೋರರು ಸಿಕ್ಕಿ ಬಿದ್ದಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಪೊಲೀಸರು ಕಾರ್ಯಾಚರಣೆಗಿಳಿದಿದ್ದರು.ಜಂಬಗಿ ತಾಂಡದ ನಿವಾಸಿಗಳಾದ ಅನೀಲ, ವಿಜಯ ಎಂಬ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಆದರೆ, ನಾಪತ್ತೆಯಾಗಿರುವ ಜಮೀನು ಮಾಲೀಕ ಗೋಪಾಲ್ಗಾಗಿ ಖಾಕಿ ಪಡೆ ಹುಡುಕಾಟ ನಡೆಸುತ್ತಿದೆ.