ಬೀದರ:ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ 14 ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಹನ್ನೊಂದು ಆರೋಪಿಗಳನ್ನು ಬಂಧಿಸಿ, 52,37,700 ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್.ತಿಳಿಸಿದರು.
ಶನಿವಾರ ಬೀದರ್ ಎಸ್ಪಿ ಕಚೇರಿ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇತ್ತೀಚೆಗೆ ಬೈಕ್ ಕಳ್ಳತನ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಪ್ರಕರಣಗಳ ತಡೆ ಹಾಗೂ ಪತ್ತೆಗೆ ಇಲಾಖೆಯು ರೌಡಿ ನಿಗ್ರಹ ದಳ ರಚಿಸಿದೆ. ಈ ತಂಡವು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಗಾಂಧಿಗಂಜ ಠಾಣೆಯಲ್ಲಿ ಆರೋಪಿಗಳ ವಿರುದ್ಧ 4 ಪ್ರಕರಣಗಳು ದಾಖಲಾಗಿದ್ದು, 40,15,000 ರೂ ಮೌಲ್ಯದ 41 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಔರಾದ್ನಲ್ಲಿ ನಡೆದ ಎರಡು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, 1,200 ರೂಪಾಯಿ ಹಾಗೂ 2,50,000 ರೂಪಾಯಿ ಮೌಲ್ಯದ 8 ಮೋಟಾರ್ ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದರು.
ಹುಮನಾಬಾದ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಪ್ರತ್ಯೇಕ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದು, 2,55,000 ಲಕ್ಷ ರೂ ಮೌಲ್ಯದ 4 ತೊಲೆ 8 ಗ್ರಾಂ ಬಂಗಾರದ ಆಭರಣ, 80 ಸಾವಿರ ರೂ ಬೆಲೆಯ ಹೊಂಡಾ ಯುನಿಕಾರ್ನ್ ಮೋಟರ್ ಸೈಕಲ್ ಹಾಗೂ 1,36,700 ರೂ ಮೌಲ್ಯದ 17 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದು ವಿವರಿಸಿದರು.