ಬೀದರ್:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಮುಸ್ಲಿಂ ಪರ ಸಂಘಟನೆಗಳು, ನಾಳೆ ಬೀದರ್ ಬಂದ್ ಕರೆ ನೀಡಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ವದಂತಿ ಹಬ್ಬಿಸಲಾಗುತ್ತಿದೆ. ಸುಳ್ಳು ಸುದ್ದಿ ಹಬ್ಬಿವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ನಾಳೆ ಬೀದರ್ ಬಂದ್ ಇಲ್ಲ.. ಎಸ್ಪಿ ಟಿ. ಶ್ರೀಧರ್ ಸ್ಪಷ್ಟನೆ - ಸಾಮಾಜಿಕ ಜಾಲತಾಣದಲ್ಲಿ ಬೀದರ್ ಬಂದ್ ಎಂದು ವದಂತಿ
ನಾಳೆ ಬೀದರ್ ಬಂದ್ ಕರೆ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವದಂತಿ ಹಬ್ಬಿಸಲಾಗುತ್ತಿದೆ. ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಎಸ್ಪಿ ಟಿ. ಶ್ರೀಧರ್
ಈ ಕುರಿತಾಗಿ ಮಾಹಿತಿ ನೀಡಿರುವ ಅವರು, ಸೋಮವಾರ ಬೀದರ್ ಬಂದ್ ಇದೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದರಿಂದ ಜನರು ಆತಂಕ ಪಡಬೇಕಾದ ಅವಶ್ಯಕತೆಯಿಲ್ಲ. ನಾಳೆ ಬಂದ್ಗೆ ಕರೆ ನೀಡಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಇಂಥ ಸುಳ್ಳು ಸುದ್ದಿಯನ್ನು ಹರಡಿಸುತ್ತಿರುವ ವ್ಯಕ್ತಿಗಳ ಬಗ್ಗೆ ಗೊತ್ತಾದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಎಸ್ಪಿ ಮನವಿ ಮಾಡಿದ್ದಾರೆ.
TAGGED:
ಸೋಮವಾರ ಬೀದರ್ ಬಂದ್ ಇಲ್ಲ