ಬೀದರ್: ಜನವರಿ 7 ರಿಂದ 9 ರವರೆಗೆ ಮೂರು ದಿನ ನಡೆಯಲಿರುವ ಬೀದರ್ ಉತ್ಸವದಲ್ಲಿ ಹೆಲಿಕಾಪ್ಟರ್ ಸಂಚಾರ ವ್ಯಸವಸ್ಥೆ ನಡೆಯಲಿದ್ದು, ಬಿಜೆಪಿ ಮುಖಂಡ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್ ಅಧ್ಯಕ್ಷ ಸೂರ್ಯಕಾಂತ್ ನಾಗಮಾರಪಳ್ಳಿ ಅವರು ಉತ್ಸವದಲ್ಲಿ ಹೆಲಿಕಾಪ್ಟರ್ ಹಾರಾಟದ ವ್ಯವಸ್ಥೆ ಮಾಡಲಿದ್ದಾರೆ.
ಬೀದರ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಈ ಕುರಿತು ಸೂರ್ಯಕಾಂತ ನಾಗಮಾರಪಳ್ಳಿ ಅವರಿಗೆ ಪತ್ರ ಬರೆದಿದ್ದು, ನಾಗಮಾರಪಳ್ಳಿ ಫೌಂಡೇಶನ್ ವತಿಯಿಂದ ಬೀದರ್ ಕೋಟೆ ಆವರಣದಲ್ಲಿ ಹೆಲಿಕಾಪ್ಟರ್ ಸಂಚಾರ ನಡೆಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ.