ಬೀದರ್: ಹೈದರಾಬಾದ್ ಕರ್ನಾಟಕ ಭಾಗ, ಕಲ್ಯಾಣ ಕರ್ನಾಟಕವೆಂದು ಮರುನಾಮಕರಣ ಆದ ಮೇಲೆ ಗಡಿ ಜಿಲ್ಲೆ ಬೀದರ್ನಲ್ಲಿ 'ಬಿದರಿ' ಸಾಂಸ್ಕೃತಿಕ ವೇದಿಕೆ ಮೂಲಕ ವಿವಿಧ ಜಾನಪದ ಕಲಾ ತಂಡಗಳ ಕಲಾವಿದರು ಸಂಭ್ರಮಿಸಿದರು.
ಬೀದರ್ನಲ್ಲಿ ಅದ್ಧೂರಿಯ 'ಬಿದರಿ' ಸಂಭ್ರಮ
ಹೈದರಾಬಾದ್ ಕರ್ನಾಟಕ ಭಾಗ, ಕಲ್ಯಾಣ ಕರ್ನಾಟಕವೆಂದು ಮರುನಾಮಕರಣಗೊಂಡ ಮೇಲೆ ಗಡಿ ಜಿಲ್ಲೆ ಬೀದರ್ನಲ್ಲಿ 'ಬಿದರಿ' ಸಾಂಸ್ಕೃತಿಕ ವೇದಿಕೆ ಮೂಲಕ ವಿವಿಧ ಜಾನಪದ ಕಲಾ ತಂಡಗಳ ಕಲಾವಿದರು ಸಂಭ್ರಮಿಸಿದರು. ಭುವನೇಶ್ವರಿ ತಾಯಿಯ ಭಾವಚಿತ್ರದ ಮೆರವಣಿಗೆಯಲ್ಲಿ ನೂರಾರು ಕಲಾವಿದರು ಭಾಗವಹಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬಿದರಿ ಸಾಂಸ್ಕೃತಿಕ ವೇದಿಕೆ ಸಂಯುಕ್ತಾಶ್ರಯದಲ್ಲಿ ನಗರದ ಕರ್ನಾಟಕ ಕಾಲೇಜಿನಿಂದ ಹೊರಟ ಭುವನೇಶ್ವರಿ ತಾಯಿಯ ಭಾವಚಿತ್ರದ ಮೇರವಣಿಗೆಯಲ್ಲಿ ನೂರಾರು ಕಲಾವಿದರು ಭಾಗವಹಿಸಿದರು. ವಿವಿಧ ನೃತ್ಯ ವಾದ್ಯಗಳೊಂದಿಗೆ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ರಂಗ ಮಂದಿರದವರೆಗೆ ಮೆರವಣಿಗೆ ನಡೆಸಿದರು.
ಹಿರಿಯ ಸಾಂಸ್ಕೃತಿಕ ಸಂಘಟಕ ಶ್ರಿನಿವಾಸ ಕಪ್ಪಣ್ಣ, ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ, ಬಿದರಿ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ರೇಖಾ ಸೌದಿ, ಜಾನಪದ ಕಲಾವಿದರ ಬಳಗದ ವಿಜಯಕುಮಾರ್ ಸೊನಾರೆ, ಕನ್ನಡಾಂಬೆ ಗೆಳೆಯರ ಬಳಗದ ವಿರುಪಾಕ್ಷ ಗಾದಗಿ, ರಾಜಕುಮಾರ್ ಹೆಬ್ಬಾಳೆ ಸೇರಿದಂತೆ ಹಲವು ಮುಖಂಡರು ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದರು.