ಬಸವ ಕಲ್ಯಾಣ:ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ -65ರ ಇಂಜಿನಿಯರಿಂಗ್ ಕಾಲೇಜ್ ಬಳಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು - Accident on Basavakalyana National Highway-65
ತಡೋಳಾ ಗ್ರಾಮದ ಶಿವರಾಜ ಮರೆಪ್ಪ ಕಾಂಬಳೆ (50) ಮೃತ ವ್ಯಕ್ತಿ. ಬಸವ ಕಲ್ಯಾಣದಿಂದ ತಡೋಳ ಗ್ರಾಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿಯಾಗಿ ಘಟನೆ ಸಂಭವಿಸಿದೆ.

ಬೈಕ್ ಸವಾರ ಸ್ಥಳದಲ್ಲೇ ಸಾವು
ಬೈಕ್ ಸವಾರ ಸ್ಥಳದಲ್ಲೇ ಸಾವು
ತಡೋಳಾ ಗ್ರಾಮದ ಶಿವರಾಜ ಮರೆಪ್ಪ ಕಾಂಬಳೆ (50) ಮೃತ ವ್ಯಕ್ತಿ. ಬಸವಕಲ್ಯಾಣದಿಂದ ತಡೋಳ ಗ್ರಾಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿಯಾಗಿ ಘಟನೆ ಸಂಭವಿಸಿದೆ.
ಸಿಪಿಐ ಮಲ್ಲಿಕಾರ್ಜುನ ಯಾತನೂರ, ಪಿಎಸ್ಐ ಜಯಶ್ರೀ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.