ಕರ್ನಾಟಕ

karnataka

ETV Bharat / state

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಒಂದೇ ಕುಟುಂಬದ ಇಬ್ಬರ ಸಾವು, ಒಬ್ಬನ ಸ್ಥಿತಿ ಗಂಭೀರ

ವಿದ್ಯುತ್ ಕಂಬಕ್ಕೆ ಬೈಕ್​ ಡಿಕ್ಕಿಯಾಗಿ ಒಂದೇ ಕುಟುಂಬದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟು, ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಸವಕಲ್ಯಾಣ ತಾಲೂಕಿನ ಸಸ್ತಾಪುರ ಗ್ರಾಮದ ಸಮೀಪ ಈ ದುರ್ಘಟನೆ ನಡೆದಿದೆ.

Bike collision: Two died
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಒಂದೇ ಕುಟುಂಬದ ಇಬ್ಬರು ಸಾವು

By

Published : Jan 13, 2021, 10:46 AM IST

ಬಸವಕಲ್ಯಾಣ: ವೇಗವಾಗಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟು, ಒಬ್ಬ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಸಸ್ತಾಪುರ ಗ್ರಾಮದ ಸಮೀಪ ನಡೆದಿದೆ.

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಒಂದೇ ಕುಟುಂಬದ ಇಬ್ಬರು ಸಾವು, ಓರ್ವ ಗಂಭೀರ

ತಾಲೂಕಿನ ಗುಂಡೂರ ಗ್ರಾಮದ ಅಂಬಾದಾಸ ತಿಪ್ಪಣ್ಣಾ ಬಡಿಗೆ (28), ರವಿ ಶಿವಪ್ಪ (42) ಮೃತರು. ಘಟನೆಯಲ್ಲಿ ತ್ರೀವವಾಗಿ ಗಾಯಗೊಂಡಿರುವ ತುಳಸಿರಾಮ ತಿಪ್ಪಣ್ಣ (20) ಎಂಬಾತನನ್ನು ಬಸವಕಲ್ಯಾಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೀದರ್​​ನ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.

ಮಂಗಳವಾರ ಮಧ್ಯ ರಾತ್ರಿ ಒಂದೇ ಬೈಕ್ ಮೇಲೆ ಈ ಮೂವರು ಸಸ್ತಾಪೂರ ಬಂಗ್ಲಾ ಕಡೆಯಿಂದ ಗುಂಡೂರು ಗ್ರಾಮಕ್ಕೆ ತೆರಳುತ್ತಿರುವಾಗ ಸಸ್ತಾಪುರ ಸಮೀಪದ ರಸ್ತೆ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಘಟನೆ ಸಂಭವಿಸಿದೆ ಎನ್ನಲಾಗ್ತಿದೆ.

ಓದಿ:ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ವಿರುದ್ಧ ಎಫ್‌ಐಆರ್!

ಸುದ್ದಿ ತಿಳಿದ ನಗರ ಠಾಣೆ ಪಿಎಸ್ಐ ಗುರು ಪಾಟೀಲ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ABOUT THE AUTHOR

...view details