ಬೀದರ್:ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುವ ಮೂಲಕ ವಿಪಕ್ಷಗಳ ಧ್ವನಿ ಕಿತ್ತುಕೊಳ್ಳುವ ಪ್ರಯತ್ನ ಮಾಡ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.
ಬಿಜೆಪಿಯವರದ್ದು ಸರ್ವಾಧಿಕಾರಿ ಧೋರಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ...! - ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟಿಲ್
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುವ ಮೂಲಕ ವಿಪಕ್ಷಗಳ ಧ್ವನಿ ಕಿತ್ತುಕೊಳ್ಳುವ ಪ್ರಯತ್ನ ಮಾಡ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.
ಜಿಲ್ಲೆಯ ಭಾಲ್ಕಿಯಲ್ಲಿ ಮಾತನಾಡಿದ ಅವರು ಮಂಗಳೂರು ಗೊಲಿಬಾರ್ ನಂತರ ಕಾಂಗ್ರೆಸ್ ನಾಯಕರಿಗೆ ಸ್ಥಳ ಪ್ರವೇಶಕ್ಕೆ ನಿರ್ಬಂಧ ಹೇರುವ ಮೂಲಕ ಸರ್ವಾಧಿಕಾರಿ ಧೋರಣೆ ತೋರಿದ್ದಾರೆ. ಅಲ್ಲದೆ ಜವಾಬ್ದಾರಿಯುತ ಸ್ಥಾನದಲ್ಲಿರುವ ಕೇಂದ್ರ ಸಚಿವ ಸುರೇಶ ಅಂಗಡಿ, ರೈಲ್ವೆ ಇಲಾಖೆ ಆಸ್ತಿಗೆ ಕೈ ಹಾಕಿದ್ರೆ ಕಂಡಲ್ಲಿ ಗುಂಡು ಹಾಕುವ ಹೇಳಿಕೆ ಕೊಟ್ಟಿದ್ದಾರೆ. ಸಚಿವರಿಗೆ ನೈತಿಕತೆ ಇದೆಯಾ...? ಇಂಥ ಸಂಸದರು ಮಂತ್ರಿ ಆಗಬೇಕಾ...? ಎಂದು ಅಸಮಾಧಾನ ಹೊರ ಹಾಕಿದರು.
ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟಿಲ್ ಅವರು ಬಿಜೆಪಿ ಅವರನ್ನು ನಿಂದಿಸುವವರೆಲ್ಲಾ ದೇಶ ದ್ರೋಹಿಗಳು ಎಂದು ಹೇಳಿದ್ದಾರೆ.