ಬೀದರ್: ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಮರು ನಿರ್ಮಾಣ ಮಾಡಿದ್ದ ಮಾಂಜ್ರಾ ಸೇತುವೆ ಕುಸಿದಿದ್ದು, ಸೇತುವೆ ಮೇಲೆ ಭಾರೀ ಗಾತ್ರದ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಅಲ್ಲದೇ ಪಕ್ಕದಲ್ಲೇ ಬಾಂದಾರು ಸೇತುವೆ ನಿರ್ಮಾಣ ಮಾಡಲು ಪ್ರಸ್ತಾಪಿಸಲಾಗಿದೆ.
ಮಾಂಜ್ರಾ ಸೇತುವೆ ಮೇಲೆ ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ - ಇದು ಈಟಿವಿ ಭಾರತ ಫಲಶೃತಿ
ಈ ಸೇತುವೆ ಮೇಲೆ ಸಂಚಾರ ಮಾಡುವ ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಗಮನಿಸಿದ ಸಚಿವರು ಹಾಗೂ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಸೇತುವೆ ಮೇಲೆ ಭಾರೀ ವಾಹನ ಸಂಚಾರಕ್ಕೆ ಕಡ್ಡಾಯ ನಿರ್ಬಂಧ ಹೇರಿದ್ದಾರೆ. ಅಲ್ಲದೆ ಬೀದರ್-ನಾಂದೇಡ ಹೆದ್ದಾರಿಯಲ್ಲಿ ಪ್ರತ್ಯೇಕ ಬಾಂದಾರು ಸೇತುವೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚನೆ ನೀಡಿದರು.
‘ಮಾಂಜ್ರಾ ಸೇತುವೆ ಒಂದು ಭಾಗ ಕುಸಿತ, ಪ್ರಯಾಣಿಕರಲ್ಲಿ ಆತಂಕ’ಎಂಬ ವಿಸ್ತೃತ ಪ್ರತ್ಯಕ್ಷ ವರದಿಯನ್ನು 'ಈಟಿವಿ ಭಾರತ' ಬೆನ್ನಲ್ಲೇ ಎಚ್ಚೆತ್ತುಕೊಂಡ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ಅವರು ಅಧಿಕಾರಿಗಳ ತಂಡದೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಸೇತುವೆ ದುರಾವಸ್ಥೆ ನೋಡಿ ಸ್ಥಳದಲ್ಲೇ ಕ್ರಮ ಕೈಗೊಂಡಿದ್ದಾರೆ.
ಜಿಲ್ಲೆಯ ಔರಾದ್ ತಾಲೂಕಿನ ಕೌಠಾ ಗ್ರಾಮದ ಬಳಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಸತತ ಮಳೆಯಿಂದಾಗಿ ಮಾಂಜ್ರಾ ನದಿಯ ಮೇಲಿನ ಸೇತುವೆಯ ಒಂದು ಭಾಗ ಕುಸಿದು ಹೋಗಿದೆ. ಹೀಗಾಗಿ ಈ ಸೇತುವೆ ಮೇಲೆ ಸಂಚರಿಸುವ ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಗಮನಿಸಿದ ಸಚಿವರು ಹಾಗೂ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಸೇತುವೆ ಮೇಲೆ ಭಾರಿ ವಾಹನ ಸಂಚಾರಕ್ಕೆ ಕಡ್ಡಾಯ ನಿರ್ಬಂಧ ಹೇರಿದ್ದಾರೆ. ಅಲ್ಲದೆ ಬೀದರ್-ನಾಂದೇಡ ಹೆದ್ದಾರಿಯಲ್ಲಿ ಪ್ರತ್ಯೇಕ ಬಾಂದಾರು ಸೇತುವೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚನೆ ನೀಡಿದರು.