ಕರ್ನಾಟಕ

karnataka

ETV Bharat / state

ಬೀದರ್ ಜಿಲ್ಲೆಯಾದ್ಯಂತ ಭಾರಿ ಮಳೆ : ಸೇತುವೆ ಮುಳುಗಡೆ, ಸಂಚಾರ ಬಂದ್ - heavy rain in bidar

ಭಾಲ್ಕಿ ತಾಲೂಕಿನ ದಾಡಗಿ ಬಳಿಯ ಹುಮನಾಬಾದ್ ಹೆದ್ದಾರಿಯಲ್ಲಿ ಅಪಾಯದ ಮಟ್ಟದಲ್ಲಿ ಸೇತುವೆ ಮೇಲೆ ನೀರು ಹರಿದಿವೆ. ಹುಮನಾಬಾದ್, ಭಾಲ್ಕಿ, ಬಸವಕಲ್ಯಾಣ, ಕಮಲನಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದ್ದಕ್ಕೆ ರೈತರ ಬೆಳೆಗಳು ನೀರು ಪಾಲಾಗಿವೆ..

bridge collapse due to heavy rain in bidar
ಸೇತುವೆ ಮುಳುಗಡೆ

By

Published : Aug 30, 2021, 5:38 PM IST

ಬೀದರ್ :ಭಾನುವಾರ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯಾದ್ಯಂತ ಜನಜೀವನ ಅಸ್ತವ್ಯಸ್ಥವಾಗಿದೆ. ಹಲವು ಕಡೆ ಸೇತುವೆಗಳು ಮುಳುಗಡೆಯಾಗಿವೆ. ರಸ್ತೆ ಬಿರುಕು ಬಿಟ್ಟ ಹಿನ್ನೆಲೆ ಸಂಚಾರ ವ್ಯವಸ್ಥೆ ಬಂದ್ ಆಗಿದೆ.

ಸೇತುವೆ ಮುಳುಗಡೆಯಾಗಿರುವುದು..

ಜಿಲ್ಲೆಯ ಹುಲಸೂರು-ಔರಾದ್ ಹೆದ್ದಾರಿ ಜಮಖಂಡಿ ಬಳಿ ಸೇತುವೆ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ. ಈ ಭಾಗದಲ್ಲಿ ಸಂಚಾರ ಸ್ತಬ್ಧವಾಗಿದೆ. ಅಲ್ಲದೆ ಬಸವಕಲ್ಯಾಣ ತಾಲೂಕಿನ ಗೋರ್ಟಾ ಬಳಿ ಮಳೆ ನೀರು‌ ಮನೆಗಳಿಗೆ ನುಗ್ಗಿದ ಪರಿಣಾಮ ಗ್ರಾಮಸ್ಥರು ಕೆಲಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.

ಭಾಲ್ಕಿ ತಾಲೂಕಿನ ದಾಡಗಿ ಬಳಿಯ ಹುಮನಾಬಾದ್ ಹೆದ್ದಾರಿಯಲ್ಲಿ ಅಪಾಯದ ಮಟ್ಟದಲ್ಲಿ ಸೇತುವೆ ಮೇಲೆ ನೀರು ಹರಿದಿವೆ. ಹುಮನಾಬಾದ್, ಭಾಲ್ಕಿ, ಬಸವಕಲ್ಯಾಣ, ಕಮಲನಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದ್ದಕ್ಕೆ ರೈತರ ಬೆಳೆಗಳು ನೀರು ಪಾಲಾಗಿವೆ.

ಪ್ರಮುಖವಾಗಿ ಉದ್ದು, ಹೆಸರು ಹಾಗೂ ಸೋಯಾಬಿನ್ ಮಣ್ಣು ಪಾಲಾಗಿವೆ. ಮಳೆಯಿಂದ ಅವಾಂತರಗಳು ಎದುರಾಗಿರುವ ಸ್ಥಳಗಳಲ್ಲಿ ತಕ್ಷಣ ಪರಿಹಾರಕ್ಕೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಆಯಾ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆ: ಜಲಾಶಯ ಭರ್ತಿ, ಹಲವೆಡೆ ಅವಾಂತರ

ABOUT THE AUTHOR

...view details