ಬೀದರ್:ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ನಿನ್ನೆ ಸಾಲು ಸಾಲು ಕಾರ್ಯಕ್ರಮಗಳಲ್ಲಿ ಭಾಗಿಯಾದ್ರು. ಡಾ. ಬಿ. ಆರ್ ಅಂಬೇಡ್ಕರ್ ಜಯಂತೋತ್ಸವ ಆಚರಿಸಿದ ಅವರು, ಇಂದಿರಾ ಕ್ಯಾಂಟಿನ್ ಲೊಕಾರ್ಪಣೆ ಮಾಡಿ ಆನಂತರ ಪಶುಗಳಿಗೆ ಮೇವಿನ ಸೇವೆ ಆರಂಭಿಸಿದರು.
ನಗರದ ಅಂಬೇಡ್ಕರ್ ವೃತದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಜಯಂತಿ ನಿಮಿತ್ತ ಅಂಬೇಡ್ಕರ್ ವೃತದಲ್ಲಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಸಂಸದ ಭಗವಂತ ಖೂಬಾ, ಶಾಸಕ ಬಂಡೆಪ್ಪ ಕಾಶೆಂಪೂರ್, ರಹಿಂಖಾನ್ ಹಾಗೂ ಜಿ. ಪಂ ಅಧ್ಯಕ್ಷೆ ಗೀತಾ ಚಿದ್ರಿ ಸೇರಿದಂತೆ ಹಲವು ಗಣ್ಯರು ಕೂಡ ಉಪಸ್ಥಿತರಿದ್ದರು.
ಇಂದಿರಾ ಕ್ಯಾಂಟೀನ್ ಉದ್ಘಾಟನೆ:
ಬಹು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಜಿಲ್ಲೆಯ ಔರಾದ್ ಪಟ್ಟಣದ ಎಂ. ಐ ಆವರಣದಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ ಮಾಡಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಅವರು, ಕೊವಿಡ್-19 ಸೊಂಕು ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್ ಡೌನ್ ನಿಂದಾಗಿ ಬಡವರು ಸಂಕಷ್ಟದಲ್ಲಿದ್ದಾರೆ. ಅಂತಹ ನಿರಾಶ್ರಿತರಿಗೆ ಇಂದಿರಾ ಕ್ಯಾಂಟಿನ್ ಪೂರಕವಾಗಿ ಕೆಲಸ ಮಾಡಲಾಗುವುದು ಎಂದರು.