ಬೀದರ್:ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಮೂಲದ ಬಿಎಸ್ಎಫ್ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಮಲನಗರ ತಾಲೂಕಿನ ಮುರ್ಗ (ಕೆ) ಗ್ರಾಮದ ಮಾಧವ ಜಟಿಂಗರಾವ್ ಕಾಲೇಕರ್ (58) ಮೃತ ಯೋಧ.
ಕಳೆದ 24 ವರ್ಷಗಳಿಂದ ಬಿಎಸ್ಎಫ್ ಕಾನ್ಸ್ಟೇಬಲ್ ಆಗಿದ್ದ ಮಾಧವ ಅವರು ಜಮ್ಮು ಕಾಶ್ಮೀರದಲ್ಲಿ ಸೇವೆ ಸಲ್ಲಿಸಿದ ಬಳಿಕ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಪಶ್ಚಿಮ ಬಂಗಾಳಕ್ಕೆ ವರ್ಗಾವಣೆಯಾಗಿತ್ತು. ಸೇವೆಗೆ ಹಾಜರಾಗಲು ತೆರಳಿದ್ದ ಅವರು ರೈಲ್ವೆ ನಿಲ್ದಾಣದಲ್ಲಿ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗ್ತಿದೆ.