ಬೀದರ್/ಬಸವಕಲ್ಯಾಣ: ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತಿರುವ ತಾಲೂಕಿನ ಬೇಟಬಾಲಕುಂದಾ ಗ್ರಾಮ ಪಂಚಾಯತ್ ಪಿಡಿಒ ರಮೇಶ ರಾಠೋಡ್ ಅವರ ವರ್ಗಾವಣೆ ರದ್ದುಪಡಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಪಿಡಿಒ ವರ್ಗಾವಣೆ ರದ್ದು ಮಾಡಿ: ಶಾಸಕರಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು - ಪಿಡಿಒ
ಬೀದರ್ನ ಬೇಟಬಾಲಕುಂದಾ ಗ್ರಾಮ ಪಂಚಾಯತ್ ಪಿಡಿಒ ರಮೇಶ ರಾಠೋಡ್ ಅವರ ವರ್ಗಾವಣೆಯನ್ನು ರದ್ದುಪಡಿಸಬೇಕು ಆಗ್ರಹಿಸಿ ಗ್ರಾಮಸ್ಥರು ಶಾಸಕ ಬಿ.ನಾರಾಯಣ ರಾವ್ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಬಿಕೆಡಿಬಿ ಕಚೇರಿಯಲ್ಲಿ ಶಾಸಕ ಬಿ.ನಾರಾಯಣ ರಾವ್ರನ್ನು ಭೇಟಿ ಮಾಡಿದ ಗ್ರಾಮಸ್ಥರು, ಪಿಡಿಒ ವರ್ಗಾವಣೆ ತಕ್ಷಣ ರದ್ದುಪಡಿಸಬೇಕು ಎಂದು ಮನವಿ ಪತ್ರ ಸಲ್ಲಿಸಿದ್ದಾರೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುವ ಎಲ್ಲ ಕಾರ್ಯ, ಚಟುವಟಿಕೆಗಳನ್ನು ನಿಯಮದಂತೆ ಸುಸೂತ್ರವಾಗಿ ಪಿಡಿಒ ಮಾಡಿಕೊಂಡು ಬರುತ್ತಿದ್ದಾರೆ. ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕಾಳಜಿ ವಹಿಸಿ ಕೆಲಸ ಮಾಡುತ್ತಿದ್ದಾರೆ. ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿಲ್ಲ. ಪಿಡಿಒ ವರ್ಗಾವಣೆ ಮಾಡಿದರೆ, ಎಲ್ಲ ಕಾರ್ಯಗಳು ಸುಸೂತ್ರವಾಗಿ ನಡೆಯುವುದಿಲ್ಲ. ಆದ್ದರಿಂದ ಪಿಡಿಒ ವರ್ಗಾವಣೆಯನ್ನು ರದ್ದುಪಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮಸ್ಥರಿಂದ ಮನವಿ ಸ್ವೀಕರಿಸಿದ ಶಾಸಕರು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.