ಬೀದರ್: ದೇಶದಲ್ಲಿ ಬಿಜೆಪಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣ ಮಾಡಿದ್ದು, ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕಿಡಿ ಕಾರಿದ್ದಾರೆ.
ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಮಾತನಾಡಿದ ಅವರು, ನಾಡಿನಾದ್ಯಂತ ಗಣೇಶ ಹಬ್ಬ ಆಚರಿಸಲಾಗುತ್ತಿದೆ. ಆದ್ರೆ ಬಿಜೆಪಿ ಮಾತ್ರ ಇಡಿ ಮೂಲಕ ಮಾಜಿ ಸಚಿವ ಡಿ.ಕೆ ಶಿವಕುಮಾರ್ರನ್ನು ರಜೆ ದಿನವೂ ವಿಚಾರಣೆ ನಡೆಸುವ ನೆಪದಲ್ಲಿ ಕಿರುಕುಳ ನೀಡುತ್ತಿದೆ. ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದ್ದು, ಗುಜರಾತ್ ಶಾಸಕರನ್ನು ಕುದುರೆ ವ್ಯಾಪಾರ ಮಾಡಲು ಬಿಡದೆ ಡಿ.ಕೆ ಶಿವಕುಮಾರ್ ರಾಜ್ಯದಲ್ಲಿ ಇಟ್ಟುಕೊಂಡಿದ್ದಕ್ಕೆ ಬಿಜೆಪಿ ಈಗ ಇಂಥ ಕೀಳು ಮಟ್ಟದ ರಾಜಕಾರಣ ಮಾಡ್ತಿದೆ ಎಂದು ಆರೋಪಿಸಿದ್ರು.