ಕರ್ನಾಟಕ

karnataka

ETV Bharat / state

ಬೊಕ್ಕಸಕ್ಕೆ ನಷ್ಟವಾದರೂ ಸರಿ, ಬೆಂಬಲ ಬೆಲೆಯೊಂದಿಗೆ ತೊಗರಿ ಖರೀದಿ: ರೈತರಿಗೆ ಸಿಎಂ ಅಭಯ - ಪಶು ಮೇಳಕ್ಕೆ ಸಿಎಂ ಯಡಿಯೂರಪ್ಪ ಚಾಲನೆ ಸುದ್ದಿ

ಮೂರು ದಿನಗಳ ಕಾಲ ನಡೆಯಲಿರುವ ರಾಜ್ಯ ಮಟ್ಟದ ಪಶು ಮೇಳಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಪಶು ಮೇಳಕ್ಕೆ ಸಿಎಂ ಯಡಿಯೂರಪ್ಪ ಚಾಲನೆ, BS Yeddyurappa drives to the PashuMela
ಪಶು ಮೇಳ

By

Published : Feb 7, 2020, 7:27 PM IST

ಬೀದರ್: ಮೂರು ದಿನಗಳ ಕಾಲ ನಡೆಯಲಿರುವ ರಾಜ್ಯ ಮಟ್ಟದ ಪಶು ಮೇಳಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿದ್ಯುಕ್ತವಾಗಿ ಚಾಲನೆ ನೀದಿದ್ದಾರೆ. ಇದೇ ವೇಳೆ ರೈತರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಸರ್ಕಾರದ ಬೊಕ್ಕಸಕ್ಕೆ ಹೊರೆಯಾದರೂ ಸರಿ, ತೊಗರಿಗೆ ಬೆಂಬಲ ಬೆಲೆ ನೀಡಲು ಸಿದ್ಧ: ಸಿಎಂ

ಇಲ್ಲಿನ ನಂದಿನಗರದಲ್ಲಿ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ಮೇಳ ಉದ್ಘಾಟನೆ ಬಳಿಕ ಮಾತನಾಡಿದ ಅವರು, ಪಶು ಸಂಗೋಪನೆ ಮತ್ತು ಪಾಲನೆ ವಿಚಾರದಲ್ಲಿ ಸರ್ಕಾರ ಕಾಳಜಿ ವಹಿಸಿದೆ. ರಾಜ್ಯದಲ್ಲಿ ಎಲ್ಲೆಡೆ ಮಳೆಯಾಗಿತ್ತು. ಆದರೆ ಬೀದರ್ ಭಾಗದಲ್ಲಿ ಮಳೆ ಕಡಿಮೆಯಾಗಿದ್ದಕ್ಕೆ ನೀರಿನ ಸಮಸ್ಯೆ ಎದುರಾಗಿದೆ ಎಂದರು.

ತೊಗರಿ ಬೆಂಬಲ ಬೆಲೆ ಖರೀದಿ ಮಾಡಲು ಸರ್ಕಾರ ಮುಂದಾಗಿದ್ದು, ಈಗಾಗಲೇ ಬೆಂಬಲ ಬೆಲೆಯೊಂದಿಗೆ 10 ಕ್ವಿಂಟಾಲ್ ತೊಗರಿ ಖರೀದಿಸುತ್ತಿದ್ದು, ಅದನ್ನು 20 ಕ್ವಿಂಟಾಲ್​ಗೆ ಹೆಚ್ಚಿಸಲಾಗುವುದು. ಕಷ್ಟದಲ್ಲಿರುವ ತೊಗರಿ ಬೆಳೆಗಾರರ ನೋವಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರದ ಬೊಕ್ಕಸಕ್ಕೆ ನಷ್ಟವಾದರೂ ಪರವಾಗಿಲ್ಲ. ಇಂದಿನಿಂದಲೇ ತೊಗರಿಯನ್ನು ಬೆಂಬಲ ಬೆಲೆಯೊಂದಿಗೆ ಖರೀದಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಅಭಯ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್​, ಸಂಸದ ಭಗವಂತ ಖೂಬಾ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಶಾಸಕರು, ಮುಖಂಡರು ಉಪಸ್ಥಿತರಿದ್ದರು.

ABOUT THE AUTHOR

...view details