ಬೀದರ್: ಮಹಾನ್ ಮಾನವತಾವಾದಿ ವಿಶ್ವಗುರು ಬಸವಣ್ಣನವರ ಕಾಯಕ ಭೂಮಿ ಬಸವಕಲ್ಯಾಣದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಅನುಭವ ಮಂಟಪ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭೂಮಿ ಪೂಜೆ ಸಲ್ಲಿಸಿದರು.
ನೂತನ ಅನುಭವ ಮಂಟಪದ ಭೂಮಿ ಪೂಜೆ ನೆರವೇರಿಸಿದ ಸಿಎಂ - 500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಅನುಭವ ಮಂಟಪ
500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಅನುಭವ ಮಂಟಪ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭೂಮಿ ಪೂಜೆ ನೆರವೇರಿಸಿದರು.
ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದೇವರ ಸಾನ್ನಿಧ್ಯಲ್ಲಿ ನಡೆಯುತ್ತಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಡಿ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಹಾಗೂ ಮಾನವ ಸಂಪನ್ಮೂಲ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಸಂಸದರಾದ ಭಗವಂತ ಖೂಬಾ, ಡಾ: ಉಮೇಶ್ ಜಾಧವ, ಶಾಸಕರಾದ ಈಶ್ವರ ಖಂಡ್ರೆ, ರಾಜಶೇಖರ್ ಪಾಟೀಲ್, ದತ್ತಾತ್ರೇಯ ಪಾಟೀಲ ರೇವುರ್, ಶುಭಾಷ್ ಗುತ್ತೇದಾರ, ರಾಜಕುಮಾರ್ ಪಾಟೀಲ್ ತೆಲ್ಕೂರ್, ಶಶಿಲ್ ನಮೋಶಿ, ಜಿಪಂ ಅಧ್ಯಕ್ಷೆ ನಿರ್ಮಲಾ ಮಾನೆಗೋಪಾಳೆ ಸೇರಿದಂತೆ ಪೂಜ್ಯರು, ಪ್ರಮುಖರು, ಗಣ್ಯರು ಪಾಲ್ಗೊಂಡಿದ್ದರು