ಬೀದರ್:ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 5 ಗಂಟೆಗೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮದಿಂದ ಹೊರಟು 10 ಗಂಟೆಗೆ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮಕ್ಕೆ ಆಗಮಿಸಲಿದ್ದಾರೆ.
ಗಡಿ ಜಿಲ್ಲೆಯಲ್ಲಿ ಕುಮಾರಸ್ವಾಮಿ ವಾಸ್ತವ್ಯ... ಏನೆಲ್ಲಾ ಕಾರ್ಯಕ್ರಮ? - kannada news
ಸಿಎಂ ಕುಮಾರಸ್ವಾಮಿ ಇಂದು ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಜನತಾದರ್ಶನ ಹಾಗೂ ಮನವಿ ಸ್ವೀಕಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ.
ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಜನತಾದರ್ಶನ ಹಾಗೂ ಮನವಿ ಸ್ವೀಕಾರ ಕಾರ್ಯದಲ್ಲಿ ಭಾಗವಹಿಸಲಿದ್ದು, ಸಂಜೆ 6.30ರಿಂದ 8.30 ಗಂಟೆಯವರೆಗೆ ರೈತರಿಗೆ ಮಾಹಿತಿ, ಸ್ಥಳೀಯ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮಗಳು ಮತ್ತು ಶಾಲಾ ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೆ ರಾತ್ರಿ ಉಜಳಂಬ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಇನ್ನು ಜೂನ್ 28ರ ಬೆಳಗ್ಗೆ 7 ಗಂಟೆಗೆ ಉಜಳಂಬ ಗ್ರಾಮದಿಂದ ರಸ್ತೆ ಮಾರ್ಗವಾಗಿ ಸಿಎಂ ಬೀದರ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿಗಳು ಹಾಗೂ ಪದನಿಮಿತ್ತ ಉಪ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.