ಕರ್ನಾಟಕ

karnataka

ETV Bharat / state

ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ಹೃದಯಾಘಾತದಿಂದ ಸಾವು - bidar lokasabha election

ಲೋಕಸಭಾ ಚುನಾವಣಾ ಕರ್ತವ್ಯದಲ್ಲಿದ್ದ ಬೇಟಬಾಲಕುಂದಾ ಗ್ರಾಪಂನಲ್ಲಿ ಕಂಪ್ಯೂಟರ್ ಡಾಟಾ ಆಪರೇಟರ್​ಗೆ ಹೃದಯಾಘಾತ. ಆಸ್ಪತ್ರೆಯಲ್ಲಿ ಗದಗೆಪ್ಪ ಸಾವು

ಹೃದಯಾಘಾತದಿಂದ ಪ್ರಕಾಶ ಗದಗೆಪ್ಪ ಸಾವು

By

Published : Apr 6, 2019, 3:59 AM IST

ಬೀದರ್: ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಯೊಬ್ಬ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೌರ ಗ್ರಾಮದ ನಿವಾಸಿ ಪ್ರಕಾಶ ಗದಗೆಪ್ಪ (32) ಮೃತ ಸಿಬ್ಬಂದಿ.

ಇವರು ಬೇಟಬಾಲಕುಂದಾ ಗ್ರಾಪಂನಲ್ಲಿ ಕಂಪ್ಯೂಟರ್ ಡಾಟಾ ಆಪರೇಟರ್ ಆಗಿ ಕಾರ್ಯನಿರ್ವಹಿಸುತಿದ್ದರು. ಚುನಾವಣೆ ಹಿನ್ನೆಲೆ ಇಲ್ಲಿನ ಸಹಾಯಕ ಆಯುಕ್ತರ ಕಾರ್ಯಾಲಯದಲ್ಲಿ ಸ್ಥಾಪಿಸಲಾದ ಸುವಿದಾ ವಿಭಾಗದಲ್ಲಿ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು.

ಕರ್ತವ್ಯಕ್ಕೆ ಹಾಜರಾಗುವ ವೇಳೆಯಲ್ಲಿ ಪ್ರಕಾಶ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಕಚೇರಿಯಲ್ಲಿದ್ದ ಸಿಬ್ಬಂದಿ ಚಿಕಿತ್ಸೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಹಶೀಲ್ದಾರ ಸಾವಿತ್ರಿ ಶರಣು ಸಲಗರ್ ತಿಳಿಸಿದ್ದಾರೆ.

ABOUT THE AUTHOR

...view details