ಬೀದರ್: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿರವಾಗಿದೆ. ಈ ಸರ್ಕಾರ ಬಹಳ ದಿನಗಳ ಕಾಲ ಇರುವುದಿಲ್ಲ. ಮಧ್ಯಂತರ ಚುನಾವಣೆಗೆ ಕಾಂಗ್ರೆಸ್ ತಯಾರಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮನ್ಸೂಚನೆ ನೀಡಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾತನಾಡಿದ್ದಾರೆ ಜಿಲ್ಲೆಯ ಬಾಲ್ಕಿ ಪಟ್ಟಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ ಆಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿಯಿಂದ ಸರಿಯಾದ ಆಡಳಿತ ನೀಡಲು ಆಗ್ತಾ ಇಲ್ಲ. ಹೀಗಾಗಿ ಇದು ಹೆಚ್ಚು ದಿನಗಳ ಕಾಲ ಉಳಿಯೋದಿಲ್ಲ. ಮಧ್ಯಂತರ ಚುನಾವಣೆಯಾಗಿ ಜನರಿಗೆ ಅನುಕೂಲಕರ ಸರ್ಕಾರ ನೀಡಲು ಕಾಂಗ್ರೆಸ್ ತಯಾರಿದೆ ಎಂದು ಖಂಡ್ರೆ ಹೇಳಿದ್ದಾರೆ.
ಮೈತ್ರಿ ಸರ್ಕಾರ ಪತನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಾರಣ ಎಂಬ ಆರೋಪವನ್ನು ತಳ್ಳಿ ಹಾಕಿದ ಖಂಡ್ರೆ, ಸಿದ್ದರಾಮಯ್ಯ ನೇರ ನುಡಿಗೆ ಖ್ಯಾತಿಯಾದವರು, ಹಿಂದೆ ಒಂದು, ಮುಂದೆ ಒಂದು ಮಾಡುವ ಜಾಯಮಾನ ಅವರದ್ದಲ್ಲ, ಹೀಗಾಗಿ ಜೆಡಿಎಸ್ ನವರು ಮಾಡಿರುವ ಆರೋಪ ಸಂಪೂರ್ಣ ಸುಳ್ಳು, ಇದನ್ನು ಖಂಡಿಸುತ್ತೇನೆ ಎಂದಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯದ ಮೇಲೆ ಅನ್ಯಾಯ ಮಾಡ್ತಿದೆ. ಲೋಕಸಭೆ ಚುನಾವಣೆಯಲ್ಲಿ 25 ಸ್ಥಾನಗಳು ಗೆಲ್ಲಿಸಿಕೊಟ್ಟ ರಾಜ್ಯದ ಜನರ ನಿರೀಕ್ಷೆಯನ್ನು ಹುಸಿಗೊಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.