ಬೀದರ್: ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿ ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮೀಸಲಾತಿ ರಕ್ಷಣೆಗೆ ಕೇಂದ್ರ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ..
ಸಂವಿಧಾನದ ಕಲಂ 16ರ ಅಡಿ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದವರಿಗೆ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಹಾಗೂ ಬಡ್ತಿಯಲ್ಲಿ ಮೀಸಲಾತಿ ಕೊಡಲಾಗಿದೆ. ಆದರೆ, ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ಮೂಲಭೂತ ಹಕ್ಕು ಅಲ್ಲ ಎಂದು ಸುಪ್ರಿಂಕೋರ್ಟ್ ತೀರ್ಪು ನೀಡಿದೆ. ಹಾಗಾಗಿ ಕೇಂದ್ರ ಸರ್ಕಾರ ಸುಪ್ರಿಂನಲ್ಲಿ ಪುನರ್ ಪರಿಶಿಲನಾ ಅರ್ಜಿ ಸಲ್ಲಿಸಬೇಕು ಎಂದು ಖಂಡ್ರೆ ಒತ್ತಾಯಿಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸಂವಿಧಾನದ ಕಲಂ 16ರ ಅಡಿ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದವರಿಗೆ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಹಾಗೂ ಬಡ್ತಿಯಲ್ಲಿ ಮೀಸಲಾತಿ ಕೊಡಲಾಗಿದೆ. ಆದರೆ, ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ಮೂಲಭೂತ ಹಕ್ಕು ಅಲ್ಲ ಎಂದು ಸುಪ್ರಿಂಕೋರ್ಟ್ ತೀರ್ಪು ನೀಡಿದೆ. ಹಾಗಾಗಿ ಕೇಂದ್ರ ಸರ್ಕಾರ ಸುಪ್ರಿಂನಲ್ಲಿ ಪುನರ್ ಪರಿಶಿಲನಾ ಅರ್ಜಿ ಸಲ್ಲಿಸಬೇಕು ಎಂದು ಖಂಡ್ರೆ ಒತ್ತಾಯಿಸಿದರು.
ಈ ವೇಳೆಯಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟೆ, ಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದ ಅರಳಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮೀನಾಕ್ಷಿ ಸಂಗ್ರಾಮ, ಮುಖಂಡರಾದ ನರಸಿಂಗರಾವ್ ಸೂರ್ಯವಂಶಿ, ಆನಂದ ದೇವಪ್ಪ, ಅಮೃತರಾವ್ ಚಿಮಕೊಡೆ ಸೇರಿ ಹಲವರು ಉಪಸ್ಥಿತರಿದ್ದರು.