ಬೀದರ್ :ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾದ ಮತ್ತು 40% ಕಮಿಷನ್ ಪಡೆದು ಭ್ರಷ್ಟಾಚಾರ ಎಸಗಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕೆಂದು ಇಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೀದರ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಪ್ರಚೋದನೆ ಹಿನ್ನೆಲೆಯಲ್ಲಿ IPC 306 ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಬೇಕು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ 13ಎ ಅಡಿಯಲ್ಲಿ ಕೇಸ್ ದಾಖಲಿಸಬೇಕು. ಆದರೆ, ಬಿಜೆಪಿಯವರ ಭ್ರಷ್ಟಾಚಾರ ಹೊರಗೆ ಬರುತ್ತದೆ ಎಂಬ ಕಾರಣಕ್ಕೆ ಉದ್ದೇಶ ಪೂರ್ವಕವಾಗಿ ಆತ್ಮಹತ್ಯೆಗೆ ಪ್ರಚೋದನೆ ನೀಡುವ ರೀತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದರು.