ಕರ್ನಾಟಕ

karnataka

ETV Bharat / state

ಬಸವಕಲ್ಯಾಣ ಬೈ ಎಲೆಕ್ಷನ್.. ಸ್ಥಳೀಯ ಟಿಕೆಟ್​ ಆಕಾಂಕ್ಷಿಗಳಿಂದ ಒಗ್ಗಟ್ಟು ಪ್ರದರ್ಶನ.. - Basavakalyana by election

ಬಸವಕಲ್ಯಾಣ ನಗರದ ತ್ರಿಪುರಾಂತ ಬಳಿಯ ಕಾಂಗ್ರೆಸ್ ಮುಖಂಡ ಶಿವರಾಜ ನರಶೆಟ್ಟೆ ಅವರ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್​​ ಪಕ್ಷದ ಏಳು ಜನ ಟಿಕೆಟ್ ಆಕಾಂಕ್ಷಿಗಳು ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸುವ ಮೂಲಕ ಸ್ಥಳೀಯರಿಗೆ ಟಿಕೆಟ್‌ ನೀಡುವಂತೆ ಪಕ್ಷದ ವರಿಷ್ಠರಿಗೆ ಸಂದೇಶ ರವಾನಿಸಿದರು..

congress-urges-local-aspirants-to-issue-tickets-at-basavakalyana
ಸ್ಥಳೀಯ ಆಕಾಂಕ್ಷಿಗಳಿಂದ ಒಗ್ಗಟ್ಟು ಪ್ರದರ್ಶನ

By

Published : Nov 22, 2020, 9:22 PM IST

ಬಸವಕಲ್ಯಾಣ: ದಿ. ಶಾಸಕ ಬಿ.ನಾರಾಯಣರಾವ್​ ನಿಧನದಿಂದಾಗಿ ತೆರವಾದ ಸ್ಥಾನಕ್ಕೆ ಮುಂಬರುವ ಕೆಲವೇ ದಿನಗಳಲ್ಲಿ ಕ್ಷೇತ್ರದಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಥಳೀಯ ಆಕಾಂಕ್ಷಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಸ್ಥಳೀಯ ಟಿಕೆಟ್ ಆಕಾಂಕ್ಷಿಗಳು ಮನವಿ ಮಾಡಿದ್ದಾರೆ.

ಸ್ಥಳೀಯ ಆಕಾಂಕ್ಷಿಗಳಿಂದ ಒಗ್ಗಟ್ಟು ಪ್ರದರ್ಶನ

ನಗರದ ತ್ರಿಪುರಾಂತ ಬಳಿಯ ಕಾಂಗ್ರೆಸ್ ಮುಖಂಡ ಶಿವರಾಜ ನರಶೆಟ್ಟೆ ಅವರ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಏಳು ಜನ ಟಿಕೆಟ್ ಆಕಾಂಕ್ಷಿಗಳು ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸುವ ಮೂಲಕ ಸ್ಥಳೀಯರಿಗೆ ಟಿಕೆಟ್‌ ನೀಡುವಂತೆ ಪಕ್ಷದ ವರಿಷ್ಠರಿಗೆ ಸಂದೇಶ ರವಾನಿಸಿದರು.

ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಲ್ಲಿ ಅನೇಕ ಜನರು ಸಮರ್ಥವಾದ ಆಕಾಂಕ್ಷಿಗಳಿದ್ದಾರೆ. ಕ್ಷೇತ್ರದ ಹೊರಗಿನಿಂದ ಬಂದವರಿಗೆ ಅವಕಾಶ ನೀಡದೆ, ಸ್ಥಳೀಯ(ತಾಲೂಕಿನ) ಆಕಾಂಕ್ಷಿಗಳಿಗೆ ಸ್ಪರ್ಧಿಸಲು ವರಿಷ್ಠರು ಅನುವು ಮಾಡಿ ಕೊಡಬೇಕು ಎಂದು ಮನವಿ ಮಾಡಿದರು.

ಸ್ಥಳೀಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ ಕಾರ್ಯಕರ್ತರು ಅವರ ಬಳಿ ಕಷ್ಟ-ಸುಖಗಳು ಹಂಚಿಕೊಳ್ಳಲು ಸಾಧ್ಯವಾಗುತ್ತದೆ. ಇಲ್ಲವಾದರೆ ಕಲಬುರಗಿ, ಬೀದರ್​ನಿಂದ ಬಂದವರಿಗೆ ಟಿಕೆಟ್ ನೀಡಿದರೆ ಕಾರ್ಯಕರ್ತರಿಗೆ ಇದರಿಂದ ತೊಂದರೆಯಾಗುತ್ತದೆ. ಗೆದ್ದರೆ ಅವರು ಸ್ಥಳೀಯರ ಕೈಗೆ ಸಿಗಲ್ಲ. ಇವೆಲ್ಲ ಅಂಶಗಳು ವರಿಷ್ಠರ ಗಮನಕ್ಕೆ ತರಲಾಗುವುದು ಎಂದು ಆಕಾಂಕ್ಷಿಗಳು ಸ್ಪಷ್ಟಪಡಿಸಿದರು.

ಈ ಕುರಿತು ಮಂಗಳವಾರ ನಗರಕ್ಕೆ ಆಗಮಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಹುಮನಾಬಾದ ಶಾಸಕ ರಾಜಶೇಖರ ಪಾಟೀಲ ಮತ್ತು ವರಿಷ್ಠರ ಬಳಿ ನಿಯೋಗ ತೆರಳಿ ಇಲ್ಲಿನ ಸ್ಥಿತಿ-ಗತಿ ಬಗ್ಗೆ ಅವರಿಗೆ ಮನವರಿಕೆ ಮಾಡಿ ಕೊಡುವ ಮೂಲಕ ನಮ್ಮಲ್ಲಿ ಯಾರಿಗಾದರೂ ಟಿಕೆಟ್ ನೀಡಿದರೆ ಖಂಡಿತವಾಗಿ ಎಲ್ಲರೂ ಸೇರಿ ದುಡಿದು ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲಾಗುವುದು ಎಂದು ತಿಳಿಸಲು ನಿರ್ಧರಿಸಲಾಗಿದೆ ಎಂದರು.

ಸ್ಥಳೀಯ ಆಕಾಂಕ್ಷಿಗಳಲ್ಲಿ ಎಲ್ಲಾ ಸಮುದಾಯದ ಜನರಿದ್ದಾರೆ. ಯಾವ ಸಮುದಾಯಕ್ಕೆ ಟಿಕೆಟ್ ನೀಡಿದರೆ ಗೆಲುವು ಸಾಧ್ಯ ಎಂದು ವರಿಷ್ಠರು ಪರಿಶೀಲಿಸಿ ಟಿಕೆಟ್ ನೀಡಬೇಕು. ಇದಕ್ಕೆ ಉಳಿದ ಆಕಾಂಕ್ಷಿಗಳು ಬದ್ದರಾಗಿರುತ್ತೇವೆ. ಅಲ್ಲದೆ, ಇನ್ನು ಸ್ಥಳೀಯ ನಾಯಕರೂ ಕೂಡ ಟಿಕೆಟ್‌ಗೆ ಬೇಡಿಕೆ ಇಟ್ಟರೆ ನಮ್ಮ ಅಭ್ಯಂತರ ಇಲ್ಲ ಎಂದು ತಿಳಿಸಿದರು.

ABOUT THE AUTHOR

...view details