ಬೀದರ್/ ಚಿತ್ರದುರ್ಗ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ನಿಧಾನವಾಗಿ ಇಳಿಕೆಯಾಗುತ್ತಿದ್ದು, ಬೀದರ್ ಹಾಗೂ ಚಿತ್ರದುರ್ಗದಲ್ಲಿ ಸಹ ಮಂಗಳವಾರ 44 ಹಾಗೂ 248 ಸೋಂಕಿತರು ಗುಣಮುಖರಾಗಿದ್ದಾರೆ.
ಬೀದರ್ನಲ್ಲಿ ಕಳೆದ 24 ಗಂಟೆಗಳಲ್ಲಿ 10 ಜನರಿಗೆ ಕೊರೊನಾ ತಗುಲಿದ್ದು, ಇದೇ ಅವಧಿಯಲ್ಲಿ 44 ಜನ ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 6,811ಕ್ಕೆ ಎರಿಕೆಯಾಗಿದೆ. 6,522 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೂ 163 ಸೋಂಕಿತರು ಸಾವನಪ್ಪಿದ್ದು, 122 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.