ಬಸವಕಲ್ಯಾಣ: ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಷೇತ್ರದ ಶಾಸಕ ಬಿ.ನಾರಾಯಣ ರಾವ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.
ಶಾಸಕ ಬಿ.ನಾರಾಯಣ ರಾವ್ ಆರೋಗ್ಯದಲ್ಲಿ ಚೇತರಿಕೆ: ವೆಂಟಿಲೇಟರನಲ್ಲಿ ಮುಂದುವರೆದ ಚಿಕಿತ್ಸೆ - ಶಾಸಕ ಬಿ.ನಾರಾಯಣ ರಾವ್
ಕೊರೊನಾದಿಂದ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಬಿ. ನಾರಾಯಣ ರಾವ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ.

ಕಳೆದ 5 ದಿನಗಳ ಹಿಂದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಶಾಸಕ ಬಿ.ನಾರಾಯಣ ರಾವ್ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿ (ವೆಂಟಿಲೇಟರ್ನಲ್ಲಿ) ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಆರೋಗ್ಯದಲ್ಲಿ ನಿಧಾನವಾಗಿ ಚೇತರಿಕೆ ಕಂಡು ಬರುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಕಾಯಿಲೆ ಸಮಸ್ಯೆಯಿಂದ ಬಳಲುತ್ತಿರುವ ಶಾಸಕ ನಾರಾಯಣರಾವ್ ಅವರಿಗೆ ಮೂರು ದಿನಗಳ ಹಿಂದೆ ಪ್ಲಾಸ್ಮಾ ಚಿಕಿತ್ಸೆಯೂ ನೀಡಲಾಗಿದೆ. ಮುಂದಿನ ಮೂರ್ನಾಲ್ಕು ದಿನಗಳ ಕಾಲ ವೆಂಟೇಲಿಟರ್‌ನಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗುತ್ತದೆ. ಆರೋಗ್ಯದಲ್ಲಿ ಮತಷ್ಟು ಚೇತರಿಕೆ ಕಂಡು ಬಂದಲ್ಲಿ ಮಾತ್ರ ಸಾಮಾನ್ಯ ವಾರ್ಡ್ಗೆ ಸ್ಥಳಾಂತರಿಸಲಾಗುವುದು ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ.