ಕರ್ನಾಟಕ

karnataka

ETV Bharat / state

ಬೀದರ್ ಜಿಲ್ಲೆಯಲ್ಲಿ ಇಂದಿನಿಂದ ನೈಟ್ ಕರ್ಫ್ಯೂ: ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದ ಕ್ರಮ - ಬೀದರ್​ ನೈಟ್​ ಕರ್ಫ್ಯೂ

ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

corona-night-curfew-in-bidar
ನೈಟ್ ಕರ್ಫ್ಯೂ

By

Published : Apr 10, 2021, 9:00 PM IST

ಬೀದರ್: ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿರುವ ಹಿನ್ನೆಲೆ ಜಿಲ್ಲಾಡಳಿತ ಇಂದಿನಿಂದ ಏಪ್ರಿಲ್‌ 20ರವರೆಗೆ ಕಠಿಣ ನೈಟ್ ಕರ್ಫ್ಯೂ ಜಾರಿಗೆ ಸೂಚನೆ ನೀಡಿದೆ.

ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ರಾತ್ರಿ 10 ಗಂಟೆ ನಂತರ ವ್ಯಾಪಾರ ವಹಿವಾಟು, ಸಾರಿಗೆ ಸಂಚಾರ, ಸುಖಾಸುಮ್ಮನೆ ರಸ್ತೆಗೆ ಬರುವ ಜನರ ಓಡಾಟಕ್ಕೂ ಬ್ರೇಕ್ ಹಾಕಲಾಗಿದೆ.

ಕೊರೊನಾ ನಿಯಂತ್ರಣಕ್ಕೆ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲನೆ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಜಿಲ್ಲೆಯಲ್ಲಿ ಕೊರೊನಾ ಹರಡದಂತೆ ಎಚ್ಚರಿಕೆ ವಹಿಸಿಕೊಳ್ಳಲಾಗಿದೆ.

ABOUT THE AUTHOR

...view details